ರ್ಯಾಲಿಯಲ್ಲಿ ಬಿಜೆಪಿ ಸಂಸದ ಹರ್ಷ ವರ್ಧನ್ ಸಾರ್ವಜನಿಕರಿಂದ ಹಲ್ಲೆಗೊಳಗಾದ ವಿಡಿಯೋ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೋವೊಂದು ವೈರಲ್ ಆಗುತ್ತಿದೆ. ಜನರ ಗುಂಪೊಂದು ವ್ಯಕ್ತಿಯ ಮೇಲೆ ಹಲ್ಲೆ ಮಾಡುವ ದೃಶ್ಯಗಳನ್ನು ವೀಡಿಯೊದಲ್ಲಿ ಕಾಣಬಹುದು. ಇದು ನಿಜವೇ ಪರಿಶೀಲಿಸೋಣ.
ಪ್ರತಿಪಾದನೆ: ಕೇಂದ್ರ ಸಚಿವ ಹರ್ಷ ವರ್ಧನ್ ಮೇಲೆ ಸಾರ್ವಜನಿಕರು ಹಲ್ಲೆ ಮಾಡಿದ ವಿಡಿಯೋ.
ಸತ್ಯಾಂಶ: ಪಶ್ಚಿಮ ಬಂಗಾಳದಲ್ಲಿ ನಡೆದ ರ್ಯಾಲಿಯಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರ ಮೇಲೆ ತೃಣಮೂಲ ಕಾಂಗ್ರೆಸ್ ಪಕ್ಷದ (ಟಿಎಂಸಿ) ಸದಸ್ಯರು ಹಲ್ಲೆ ಮಾಡಿದ್ದಾರೆ ಎಂಬುದನ್ನು ವಿಡಿಯೋದಲ್ಲಿ ಕಾಣಬಹುದು. 2016 ರಲ್ಲಿ ಪಶ್ಚಿಮ ಬಂಗಾಳದ ಅಸನ್ಸೋಲ್ ಜಿಲ್ಲೆಯಲ್ಲಿ ನಡೆದ ರ್ಯಾಲಿಯಲ್ಲಿ ಬಿಜೆಪಿ ಸಂಸದ ಬಾಬುಲ್ ಸುಪ್ರಿಯೋ ಮತ್ತು ಅವರ ಬೆಂಬಲಿಗರ ಮೇಲೆ ಟಿಎಂಸಿ ಸದಸ್ಯರು ಹಲ್ಲೆ ನಡೆಸಿದ್ದರು. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.
ರಿವರ್ಸ್ ಇಮೇಜ್ ಹುಡುಕಾಟದಲ್ಲಿ, 19 ಅಕ್ಟೋಬರ್ 2016 ರಂದು ಎಬಿಪಿ ನ್ಯೂಸ್ ’ಯೂಟ್ಯೂಬ್ ಚಾನೆಲ್ ಪ್ರಕಟಿಸಿದ ವೀಡಿಯೊದಲ್ಲಿ ಇದೇ ರೀತಿಯ ದೃಶ್ಯಗಳಿರುವುದು ಕಂಡುಬಂದಿವೆ. ವಿಡಿಯೋ ವಿವರಣೆಯಲ್ಲಿ, ಪಶ್ಚಿಮ ಬಂಗಾಳದ ಅಸನ್ಸೋಲ್‌ನಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ (ಟಿಎಂಸಿ) ಸದಸ್ಯರು ಬಿಜೆಪಿ ಸಂಸದ ಬಾಬುಲ್ ಸುಪ್ರಿಯೋ ಅವರ ಮೇಲೆ ನಡೆಸಿದ ದಾಳಿ ಎಂದು ಉಲ್ಲೇಖಿಸಲಾಗಿದೆ. ಈ ಕೀವರ್ಡ್‌ಗಳನ್ನು ಬಳಸಿಕೊಂಡು ಹೆಚ್ಚಿನ ವಿವರಗಳಿಗಾಗಿ ಹುಡುಕಿದಾಗ, ಅಧಿಕೃತ ‘ಎಎನ್‌ಐ ನ್ಯೂಸ್’ ಯೂಟ್ಯೂಬ್ ಚಾನೆಲ್ ಪ್ರಕಟಿಸಿದ ವೀಡಿಯೊದಲ್ಲಿ ಅದೇ ದೃಶ್ಯಗಳು ಕಂಡುಬಂದಿವೆ. ಪಶ್ಚಿಮ ಬಂಗಾಳದ ಅಸನ್ಸೋಲ್ ಜಿಲ್ಲೆಯಲ್ಲಿ, 19 ಅಕ್ಟೋಬರ್ 2016 ರಂದು ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಮತ್ತು ಅವರ ಹಿಂಬಾಲಕರ ಮೇಲೆ ಟಿಎಂಸಿ ಬೆಂಬಲಿಗರಿಂದ ಹಲ್ಲೆ ನಡೆಸಲಾಗಿದೆ ಎಂದು ವಿವರಣೆಯಲ್ಲಿ ಉಲ್ಲೇಖಿಸಲಾಗಿದೆ. ಜನರ ಗುಂಪೊಂದು ಕಲ್ಲುಗಳನ್ನು ಎಸೆದು ಬಿಜೆಪಿ ಪಕ್ಷದ ಕಾರ್ಯಕರ್ತರನ್ನು ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಥಳಿಸಿದೆ ಎಂದು ಉಲ್ಲೇಖಿಸಲಾಗಿದೆ. ಬಿಜೆಪಿ ಕಾರ್ಯಕರ್ತನನ್ನು ಥಳಿಸಲಾಯಿತು ಮತ್ತು ಅವರ ಬಟ್ಟೆಗಳನ್ನು ಟಿಎಂಸಿ ಸದಸ್ಯರು ಕಿತ್ತುಹಾಕಿದ್ದಾರೆ ಎಂದು ದೃಶ್ಯಗಳು ತೋರಿಸುತ್ತವೆ ಎಂದು ಎಎನ್‌ಐ ವರದಿ ಮಾಡಿದೆ.
ಯೂಟ್ಯೂಬ್‌ನಲ್ಲಿ ‘ಇನ್‌ಖಬರ್’ ಸುದ್ದಿ ಚಾನೆಲ್ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಇದೇ ರೀತಿಯ ವಿವರಣೆಯೊಂದಿಗೆ ಅದೇ ದೃಶ್ಯಗಳು ಕಂಡುಬಂದಿವೆ. ಈ ಘಟನೆಯ ಬಗ್ಗೆ ಸುದ್ದಿ ಲೇಖನಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.
ಒಟ್ಟಾರೆಯಾಗಿ ಹೇಳುವುದಾದರೆ, ಪಶ್ಚಿಮ ಬಂಗಾಳದ ಹಲ್ಲೆಗೊಳಗಾದ ಬಿಜೆಪಿ ಪಕ್ಷದ ಕಾರ್ಯಕರ್ತರನ್ನು ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಎಂದು ತಪ್ಪಾಗಿ ಚಿತ್ರಿಸಲಾಗಿದೆ.