Fake News - Kannada
 

ಭಾರತ ಸರ್ಕಾರ ನೀಡುವ ಅತ್ಯುನ್ನತ ಚಲನಚಿತ್ರ ಪ್ರಶಸ್ತಿಯಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಕಾಶ್ಮೀರ ಫೈಲ್ಸ್ ಗೆಲ್ಲಲಿಲ್ಲ

0

ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವು ಅತ್ಯುತ್ತಮ ಚಿತ್ರಕ್ಕಾಗಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಗೆದ್ದಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಅನ್ನು ಹಂಚಿಕೊಳ್ಳಲಾಗುತ್ತಿದೆ. ಈ ಬಗ್ಗೆ ಸರಿಯಾದ ವಿವರಗಳನ್ನು ಈ ಲೇಖನದ ಮೂಲಕ ತಿಳಿಯೋಣ.

ಕ್ಲೇಮ್: 2022 ರ ಚಲನಚಿತ್ರ ‘ದಿ ಕಾಶ್ಮೀರ್ ಫೈಲ್ಸ್’ ಅತ್ಯುತ್ತಮ ಚಲನಚಿತ್ರಕ್ಕಾಗಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಗೆದ್ದಿದೆ.

ಫ್ಯಾಕ್ಟ್: ಈ ಪ್ರಶಸ್ತಿಯು ಸಿನಿಮಾ ಕ್ಷೇತ್ರದಲ್ಲಿ ಭಾರತ ಸರ್ಕಾರವು ವಾರ್ಷಿಕವಾಗಿ ನೀಡುವ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಸಂಬಂಧಿಸಿಲ್ಲ. ದಿ ಕಾಶ್ಮೀರ್ ಫೈಲ್ಸ್ ಚಲನಚಿತ್ರವು 2016 ರಲ್ಲಿ ಸ್ಥಾಪಿಸಲಾದ ದಾದಾಸಾಹೇಬ್ ಫಾಲ್ಕೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ (DPIFF) ನೀಡಿದ ಪ್ರಶಸ್ತಿಯನ್ನು ಗೆದ್ದುಕೊಂಡಿತು. ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು 1969 ರಲ್ಲಿ ಕೇಂದ್ರ ಸರ್ಕಾರ ಸ್ಥಾಪಿಸಿತು. ಮೂಲತಃ, ಪ್ರಶಸ್ತಿಯು ಅತ್ಯುತ್ತಮ ಚಿತ್ರ ವಿಭಾಗವನ್ನು ಹೊಂದಿರಲಿಲ್ಲ. ಭಾರತೀಯ ಚಿತ್ರರಂಗದ ಬೆಳವಣಿಗೆಗೆ ಕಾರಣಕರ್ತರಾದವರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಆದ್ದರಿಂದ ಪೋಸ್ಟ್‌ನಲ್ಲಿ ಮಾಡಿದ ಕ್ಲೇಮ್ ತಪ್ಪುದಾರಿಗೆಳೆಯುವಂತಿದೆ.

ದಿ ಕಾಶ್ಮೀರ್ ಫೈಲ್ಸ್ ಪ್ರಶಸ್ತಿಯ ಬಗ್ಗೆ ಅಂತರ್ಜಾಲದಲ್ಲಿ ಹುಡುಕಿದಾಗ, ಫೆಬ್ರವರಿ 20 ರಂದು ದಾದಾಸಾಹೇಬ್ ಫಾಲ್ಕೆ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ (ಡಿಪಿಐಎಫ್ಎಫ್) ಆಯೋಜಿಸಿದ್ದ ಮುಖ್ಯ ಪ್ರಶಸ್ತಿ ಕಾರ್ಯಕ್ರಮದಲ್ಲಿ ದಿ ಕಾಶ್ಮೀರ್ ಫೈಲ್ಸ್ ಅತ್ಯುತ್ತಮ ಚಲನಚಿತ್ರ ವಿಭಾಗವನ್ನು ಗೆದ್ದಿದೆ ಎಂದು ತಿಳಿದುಬಂದಿದೆ.

ದಾದಾಸಾಹೇಬ್ ಫಾಲ್ಕೆ ಅಂತರಾಷ್ಟ್ರೀಯ ಚಲನಚಿತ್ರೋತ್ಸವ (DPIFF) ಅನ್ನು 2016 ರಲ್ಲಿ ಸ್ಥಾಪಿಸಲಾಯಿತು. ಈ ಪ್ರಶಸ್ತಿಗಳನ್ನು ಅತ್ಯುತ್ತಮ ಚಲನಚಿತ್ರ, ಅತ್ಯುತ್ತಮ ನಿರ್ದೇಶಕ, ಅತ್ಯುತ್ತಮ ನಟಿ, ಇತ್ಯಾದಿ ವಿಭಾಗಗಳಲ್ಲಿ ನೀಡಲಾಗುತ್ತದೆ. ಈ ವರ್ಷದ ವಿಜೇತರ ಪಟ್ಟಿಯನ್ನು ಈ ಸುದ್ದಿ ಲೇಖನದಲ್ಲಿ ಕಾಣಬಹುದು.

ಆದರೆ ಭಾರತ ಸರ್ಕಾರ ನೀಡುವ ಈ ಪ್ರಶಸ್ತಿ ಮತ್ತು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಒಂದೇ ಅಲ್ಲ. ಪ್ರತಿ ವರ್ಷ ಭಾರತ ಸರ್ಕಾರವು ಚಲನಚಿತ್ರ ಉದ್ಯಮದ ಅಭಿವೃದ್ಧಿಗೆ ಕೊಡುಗೆ ನೀಡಿದವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡುತ್ತದೆ. ಈ ಪ್ರಶಸ್ತಿಯನ್ನು ವಾರ್ಷಿಕವಾಗಿ ಒಬ್ಬ ವ್ಯಕ್ತಿಗೆ ಮಾತ್ರ ನೀಡಲಾಗುತ್ತದೆ. ಈ ವರ್ಷದ ಸೆಪ್ಟೆಂಬರ್‌ನಲ್ಲಿ ನಡೆದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ನಟಿ ಆಶಾ ಪರೇಖ್ ಈ ಪ್ರಶಸ್ತಿಯನ್ನು ಪಡೆದರು. ಅವರಿಗೆ 2020ನೇ ಸಾಲಿನ ಈ ಪ್ರಶಸ್ತಿಯನ್ನು ನೀಡಲಾಗಿದೆ.

ಈ ಹಿಂದೆ ಅಮಿತಾಬ್ ಬಚ್ಚನ್, ಲತಾ ಮಂಗೇಶ್ಕರ್, ಕೆ. ವಿಶ್ವನಾಥ್ ಹಾಗೂ ಅನೇಕ ಚಿತ್ರರಂಗದ ಗಣ್ಯರಿಗೆ ಭಾರತ ಸರ್ಕಾರ ಈ ಪ್ರಶಸ್ತಿ ನೀಡಿದೆ.

ಅಂತಿಮವಾಗಿ, ಕಾಶ್ಮೀರ ಫೈಲ್ಸ್ ಗೆದ್ದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯು ಭಾರತ ಸರ್ಕಾರ ನೀಡುವ ಸಿನಿಮಾ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯಿಂದ ಪ್ರತ್ಯೇಕವಾಗಿದೆ.

Share.

Comments are closed.

scroll