ಬಿಜೆಪಿ ಶಾಸಕಿ ರೇಖಾ ಗುಪ್ತಾ ಅವರು ಫೆಬ್ರವರಿ 20, 2025 ರಂದು ದೆಹಲಿಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ, ರೇಖಾ ಗುಪ್ತಾ ಅವರ ಹಳೆಯ ವಿಡಿಯೋ ಎಂದು ಹೇಳಿಕೊಂಡು ಮಹಿಳೆಯೊಬ್ಬರು ಕೋಲು ಮತ್ತು ಕತ್ತಿ ಹಿಡಿದು ಕುಳಿತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದೆ (ಇಲ್ಲಿ). ಹಾಗಾದರೆ ಈ ಪೋಸ್ಟ್ನಲ್ಲಿ ಮಾಡಲಾದ ಕ್ಲೇಮ್ ಅನ್ನು ಪರಿಶೀಲಿಸೋಣ.

ಕ್ಲೇಮ್: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಕೋಲು ಮತ್ತು ಕತ್ತಿವರಸೆ ಮಾಡುತ್ತಿರುವ ವಿಡಿಯೋ.
ಫ್ಯಾಕ್ಟ್: ವಿಡಿಯೋದಲ್ಲಿರುವ ಮಹಿಳೆಯ ಹೆಸರು ಪಾಯಲ್ ಜಾಧವ್. ಅವರು ಮರಾಠಿ ನಟಿ ಮತ್ತು ಭರತನಾಟ್ಯ ನರ್ತಕಿ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಕ್ಲೇಮ್ ಸುಳ್ಳು.
ಮೊದಲಿಗೆ, ವೈರಲ್ ವೀಡಿಯೊದಲ್ಲಿರುವ ದೃಶ್ಯಗಳ ಮೇಲೆ ನಾವು ರಿವರ್ಸ್ ಇಮೇಜ್ ಹುಡುಕಾಟವನ್ನು ನಡೆಸಿದಾಗ ಮೂಲ ವೀಡಿಯೊ (ಆರ್ಕೈವ್) ಅನ್ನು ಫೆಬ್ರವರಿ 19, 2025 ರಂದು ಪಾಯಲ್ ಜಾಧವ್ (@i_mpayal) ಎಂಬ ಮರಾಠಿ ನಟಿಯ ಇನ್‌ಸ್ಟಾಗ್ರಾಮ್ ಅಕೌಂಟ್ ನಲ್ಲಿ ಅಪ್‌ಲೋಡ್ ಮಾಡಲಾಗಿದೆ ಎಂದು ಕಂಡುಬಂದಿದೆ. ಶಿವಾಜಿ ಜಯಂತಿಯ ಸಂದರ್ಭದಲ್ಲಿ ತಾನು ಈ ವೀಡಿಯೊದಲ್ಲಿ ನಟಿಸಿದ್ದೇನೆ ಎಂದು ಅವರು ತಮ್ಮ ವಿವರಣೆಯಲ್ಲಿ ಉಲ್ಲೇಖಿಸಿದ್ದಾರೆ.
ನಟಿ ಮತ್ತು ಭರತನಾಟ್ಯ ನರ್ತಕಿ ಪಾಯಲ್ ಜಾಧವ್ ಅವರ ಇನ್‌ಸ್ಟಾಗ್ರಾಮ್ ಅಕೌಂಟ್ ಅವರು ನಟಿಸಿದ ಚಲನಚಿತ್ರಗಳು ಮತ್ತು ನಾಟಕಗಳ ಫೋಟೋಗಳು ಮತ್ತು ವೀಡಿಯೊಗಳನ್ನು ಸಹ ಒಳಗೊಂಡಿದೆ (ಇಲ್ಲಿ, ಇಲ್ಲಿ ಮತ್ತು ಇಲ್ಲಿ). ವೈರಲ್ ವಿಡಿಯೋದಲ್ಲಿರುವ ಮಹಿಳೆ (ಪಾಯಲ್ ಜಾಧವ್) ಅವರನ್ನು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರೊಂದಿಗೆ ಹೋಲಿಸಿದಾಗ, ಇಬ್ಬರೂ ವಿಭಿನ್ನ ಮಹಿಳೆಯರು ಎಂಬುದು ಸ್ಪಷ್ಟವಾಗುತ್ತದೆ.

ಸುದ್ದಿ ವರದಿಗಳ ಪ್ರಕಾರ, ರೇಖಾ ಗುಪ್ತಾ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಹಿನ್ನೆಲೆಯಿಂದ ಬಂದವರು. 1996-97ರಲ್ಲಿ, ಅವರು ಆರ್‌ಎಸ್‌ಎಸ್‌ನ ಅಂಗಸಂಸ್ಥೆಯಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಯಿಂದ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ನಂತರ ಅವರು ಮೂರು ಬಾರಿ ಪುರಸಭೆ ಸದಸ್ಯರಾಗಿ ಮತ್ತು ಒಮ್ಮೆ ಶಾಸಕರಾಗಿ ಆಯ್ಕೆಯಾದರು. ಫೆಬ್ರವರಿ 20, 2025 ರಂದು ದೆಹಲಿಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಕೊನೆಯದಾಗಿ ಹೇಳುವುದಾದರೆ, ವೈರಲ್ ವಿಡಿಯೋದಲ್ಲಿ ಕತ್ತಿ ಹಿಡಿದಿರುವ ಮಹಿಳೆ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅಲ್ಲ, ಬದಲಾಗಿ ಮರಾಠಿ ನಟಿ ಪಾಯಲ್ ಜಾಧವ್.