Fake News - Kannada
 

ಗಾಯಗೊಂಡಿರುವ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗಾಲಿಕುರ್ಚಿಯಿಂದ ಎದ್ದು ನಡೆದುಕೊಂಡು ಹೋಗುತ್ತಿದ್ದಾರೆ ಎಂದು ಎಡಿಟೆಡ್ ಫೋಟೋವನ್ನು ಹಂಚಿಕೊಳ್ಳಲಾಗುತ್ತಿದೆ

0

ಗಾಯಗೊಂಡಿರುವ ಮಮತಾ ಬ್ಯಾನರ್ಜಿ ಇದ್ದಕ್ಕಿದ್ದಂತೆ ಗಾಲಿಕುರ್ಚಿಯಿಂದ ಎದ್ದುನಿಂತು ನಡೆದುಕೊಂಡು ಹೋಗುತ್ತಿರುವ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 2021 ರ ಮಾರ್ಚ್ 10 ರಂದು ನಂದಿಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಗಾಯಗೊಂಡಿದ್ದರು. ಈಗ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಪೋಸ್ಟ್‌ನ ಆರ್ಕೈವ್ ಮಾಡಲಾದ ಆವೃತ್ತಿಯನ್ನು ಇಲ್ಲಿ ನೋಡಬಹುದು.

ಪ್ರತಿಪಾದನೆ: ಮಮತಾ ಬ್ಯಾನರ್ಜಿ ಇದ್ದಕ್ಕಿದ್ದಂತೆ ತನ್ನ ಗಾಲಿಕುರ್ಚಿಯಿಂದ ನಡೆದುಕೊಂಡು ಹೋಗುತ್ತಿರುವ ಫೋಟೋ.

ನಿಜಾಂಶ: ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ಫೋಟೋವನ್ನು ಎಡಿಟ್ ಮಾಡಲಾಗಿದೆ. ಮೂಲ ಫೋಟೋದಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆಸ್ಪತ್ರೆಯಿಂದ ಗಾಲಿಕುರ್ಚಿಯಲ್ಲಿ ಹೊರಬರುತ್ತಿದ್ದಾರೆ. ಮಾರ್ಚ್ 21, 2021 ರಂದು ಮಮತಾ ಬ್ಯಾನರ್ಜಿಯನ್ನು ಎಸ್‌ಎಸ್‌ಕೆಎಂ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿದಾಗ ಈ ಫೋಟೋವನ್ನು ತೆಗೆಯಲಾಗಿದೆ. ಈ ತಿರುಚಿದ ಫೋಟೋವನ್ನು ಕೃಷ್ಣ ಎಂಬ ಫೋಟೋ ಎಡಿಟರ್ ರಚಿಸಿದ್ದಾರೆ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ಫೋಟೋವನ್ನು ರಿವರ್ಸ್ ಇಮೇಜ್ ಹುಡುಕಾಟ ಮಾಡಿದಾಗ, ಮಾರ್ಚ್ 21, 2021 ರಂದು ಮಮತಾ ಬ್ಯಾನರ್ಜಿಯನ್ನು ಕೋಲ್ಕತ್ತಾದ ಎಸ್‌ಎಸ್‌ಕೆಎಂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದಾಗ ಈ ಫೋಟೋವನ್ನು ಸೆರೆಹಿಡಿಯಲಾಗಿದೆ ಎಂದು ತಿಳಿದುಬಂದಿದೆ. ಮೂಲ ಫೋಟೋದಲ್ಲಿ, ಮಮತಾ ಬ್ಯಾನರ್ಜಿ ಆಸ್ಪತ್ರೆಯಿಂದ ಹೊರಬರುತ್ತಿದ್ದರು, ಆದರೆ ಅವರು ಆ ಫೋಟೋದಲ್ಲಿ ಗಾಲಿಕುರ್ಚಿಯಲ್ಲಿ ಕುಳಿತಿದ್ದಾರೆ. ಈ ಮೂಲ ಫೋಟೋವನ್ನು ಹಲವಾರು ಸುದ್ದಿ ಲೇಖನಗಳಲ್ಲಿ ಪ್ರಕಟಿಸಲಾಗಿದೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ಕಾಣಬಹುದು.

ಈ ಎಡಿಟ್ ಮಾಡಿದ ಫೋಟೋವನ್ನು ಕೃಷ್ಣ ಎಂಬ ಫೋಟೋ ಎಡಿಟರ್ ರಚಿಸಿದ್ದಾರೆ. ಈ ಸಂಪಾದಿತ ಚಿತ್ರವನ್ನು ಕೃಷ್ಣ 14 ಮಾರ್ಚ್ 2021 ರಂದು ತಮ್ಮ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ 2021 ಮಾರ್ಚ್ 10 ರಂದು ನಂದಿಗ್ರಾಮದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಗಾಯಗೊಂಡಿದ್ದರು. ನಂತರ ಅವರನ್ನು ಎಸ್‌ಎಸ್‌ಕೆಎಂ ಆಸ್ಪತ್ರೆಗೆ ದಾಖಲಿಸಲಾಯಿತು. ಮಮತಾ ಬ್ಯಾನರ್ಜಿ ಮತ್ತು ತೃಣಮೂಲ ಕಾಂಗ್ರೆಸ್ ಪಕ್ಷದ ಮುಖಂಡರು ಇದನ್ನು ಕೆಲವು ಅಪರಿಚಿತ ವ್ಯಕ್ತಿಗಳು ಯೋಜಿಸಿದ ಉದ್ದೇಶಪೂರ್ವಕ ದಾಳಿ ಎಂದು ಆರೋಪಿಸಿದ್ದರು. ಬಿಜೆಪಿ ಮತ್ತು ಕಾಂಗ್ರೆಸ್ ಈ ದಾಳಿಯನ್ನು ‘ಚುನಾವಣೆಗೆ ಮೊದಲು ಅನುಕಂಪ ಗಿಟ್ಟಿಸುವ ತಂತ್ರ’ವೆಂದು ಕರೆದವು. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ಮೇಲೆ ಉದ್ದೇಶಪೂರ್ವಕ ದಾಳಿಯ ಆರೋಪವನ್ನು ಚುನಾವಣಾ ಆಯೋಗ ತಳ್ಳಿಹಾಕಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಗಾಯಗೊಂಡ ಮಮತಾ ಬ್ಯಾನರ್ಜಿ ಇದ್ದಕ್ಕಿದ್ದಂತೆ ಎದ್ದು ತನ್ನ ಗಾಲಿಕುರ್ಚಿಯಿಂದ ನಡೆದುಕೊಂಡು ಹೋಗುತ್ತಿರುವ ದೃಶ್ಯಗಳು ಎಂದು ಎಡಿಟ್ ಮಾಡಿದ ಚಿತ್ರವನ್ನು ತಪ್ಪಾಗಿ ಹಂಚಿಕೊಳ್ಳಲಾಗಿದೆ.

Share.

About Author

Comments are closed.

scroll