Fake News - Kannada
 

RSSನ ಮೋಹನ್ ಭಾಗವತ್‌ರನ್ನು ಓವೈಸಿ ಭೇಟಿ ಆಗಿದ್ದಾರೆ ಎಂಬುದು ಎಡಿಟ್ ಮಾಡಲಾದ ಫೋಟೋ

0

ಕಾರ್ಯಕ್ರಮವೊಂದರಲ್ಲಿ ಎಐಎಂಐಎಂ ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಭೇಟಿ ಮಾಡುತ್ತಿರುವ ಇತ್ತೀಚಿನ ಚಿತ್ರ ಎಂದು ಹೇಳಿಕೊಳ್ಳುವ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಚಿತ್ರದಲ್ಲಿ ಅಸಾದುದ್ದೀನ್ ಓವೈಸಿ ಅವರು ಮೋಹನ್ ಭಾಗವತ್ ಅವರ ಪಕ್ಕದಲ್ಲಿ ಕುಳಿತಿದ್ದಾರೆ. ಪೋಸ್ಟ್ ಆಗಿರುವ ಈ ಫೋಟೋವನ್ನು ಹಾಗೂ ಫೋಟೋದ ನೈಜತೆಯನ್ನು ಒಮ್ಮೆ ಪರಿಶೀಲಿಸೋಣ.

ಪ್ರತಿಪಾದನೆ: AIMIM ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ RSS ಅಧ್ಯಕ್ಷ ಮೋಹನ್ ಭಾಗವತ್ ಜೊತೆಗೆ ಕುಳಿತಿರುವ ಫೋಟೋ.

ನಿಜಾಂಶ: ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ಫೋಟೋ ಎಡಿಟ್ ಮಾಡಲಾಗಿದೆ. ಮೂಲ ಚಿತ್ರದಲ್ಲಿ ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ಅವರ ಪಕ್ಕದಲ್ಲಿ ಮೋಹನ್ ಭಾಗವತ್ ಕುಳಿತಿದ್ದು ಅದನ್ನು ತಿರುಚಿ AIMIM ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕೂತಿರುವಂತೆ ಎಡಿಟ್ ಮಾಡಲಾಗಿದೆ. ಭಾರತದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅಧಿಕೃತ ನಿವಾಸದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮೋಹನ್ ಭಾಗವತ್ ಮತ್ತು ಮುಲಾಯಂ ಸಿಂಗ್ ಯಾದವ್ ಭಾಗವಹಿಸಿದ್ದಾಗ ಈ ಫೋಟೋ ತೆಗೆಯಲಾಗಿದೆ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ಫೋಟೋವನ್ನು ಗೂಗಲ್ ರಿವರ್ಸ್ ಇಮೇಜ್‌ ಸರ್ಚ್ ಮಾಡಿದಾಗ, 22 ಡಿಸೆಂಬರ್ 2021 ರಂದು ‘ದಿ ಟೈಮ್ಸ್ ಆಫ್ ಇಂಡಿಯಾ’ ಸುದ್ದಿ ವೆಬ್‌ಸೈಟ್ ಪ್ರಕಟಿಸಿದ ಲೇಖನದಲ್ಲಿ ಇದೇ ರೀತಿಯ ಫೋಟೋ ಕಂಡುಬಂದಿದೆ. ಲೇಖನದಲ್ಲಿ ಹಂಚಿಕೊಂಡ ಮೂಲ ಚಿತ್ರವು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸಮಾಜವಾದಿ ಪಕ್ಷದ ಮುಲಾಯಂ ಸಿಂಗ್ ಯಾದವ್ ಪಕ್ಕದಲ್ಲಿ ಕುಳಿತಿರುವುದನ್ನು ತೋರಿಸುತ್ತದೆ. ಅಲ್ಲಿ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಇಲ್ಲ. ಫೋಟೋದ ವಿವರಣೆಯು ಹೀಗೆ ಹೇಳುತ್ತದೆ, ನವದೆಹಲಿಯಲ್ಲಿ “ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರ ಮೊಮ್ಮಗಳ ಆರತಕ್ಷತೆಯಲ್ಲಿ ಸಂಸದ ಮುಲಾಯಂ ಸಿಂಗ್ ಯಾದವ್ ಉಪಸ್ಥಿತರಿದ್ದು ಸಂಸದೀಯ ವ್ಯವಹಾರಗಳ ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಸ್ವಾಗತಿಸಿದ್ದಾರೆ”.

ಅದೇ ರೀತಿ ವರದಿ ಮಾಡುತ್ತಾ, ಹಲವಾರು ಸುದ್ದಿ ವೆಬ್‌ಸೈಟ್‌ಗಳು ತಮ್ಮ ಲೇಖನಗಳಲ್ಲಿ ಮೂಲ ಚಿತ್ರವನ್ನು ಹಂಚಿಕೊಂಡಿವೆ. ಅವುಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ಕಾಣಬಹುದು. ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಕೂಡ ಈ ಫೋಟೋವನ್ನು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಈ ಫೋಟೋವನ್ನು 20 ಡಿಸೆಂಬರ್ 2021 ರಂದು ಸೆರೆಹಿಡಿಯಲಾಗಿದೆ, ಮೋಹನ್ ಭಾಗವತ್ ಮತ್ತು ಮುಲಾಯಂ ಸಿಂಗ್ ಯಾದವ್ ಅವರು ಭಾರತದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅಧಿಕೃತ ನಿವಾಸದಲ್ಲಿ ಆಯೋಜಿಸಲಾದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ಅವರ ಫೋಟೋವನ್ನು ಎಡಿಟ್ ಮಾಡಿ ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿಯು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಭೇಟಿ ಮಾಡಿದ ಇತ್ತೀಚಿನ ದೃಶ್ಯಗಳಂತೆ ತಪ್ಪಾಗಿ ಹಂಚಿಕೊಳ್ಳಲಾಗಿದೆ.

Share.

Comments are closed.

scroll