ಜುಲೈ 15, 2025 ರಿಂದ ದ್ವಿಚಕ್ರ ವಾಹನ ಸವಾರರು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಯಾಣಿಸಲು ಟೋಲ್ ಶುಲ್ಕವನ್ನು ಪಾವತಿಸಬೇಕಾಗುತ್ತದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಮತ್ತು ರಸ್ತೆ ಸಾರಿಗೆ ಸಚಿವಾಲಯ ಘೋಷಿಸಿದೆ ಎಂದು ಹೇಳುವ ಪೋಸ್ಟ್ (ಇಲ್ಲಿ) ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಹಾಗಾದರೆ ಈ ಪೋಸ್ಟ್ನಲ್ಲಿ ಮಾಡಲಾದ ಕ್ಲೇಮ್ ಅನ್ನು ಪರಿಶೀಲಿಸೋಣ.
ಕ್ಲೇಮ್: ಜುಲೈ 15, 2025 ರಿಂದ, ದ್ವಿಚಕ್ರ ವಾಹನಗಳು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಯಾಣಿಸಲು ಟೋಲ್ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಫ್ಯಾಕ್ಟ್: ದ್ವಿಚಕ್ರ ವಾಹನಗಳಿಗೆ ಟೋಲ್ ವಿನಾಯಿತಿ ಎಂದಿನಂತೆ ಮುಂದುವರಿಯುತ್ತದೆ ಮತ್ತು ದ್ವಿಚಕ್ರ ವಾಹನಗಳಿಗೆ ಟೋಲ್ ಶುಲ್ಕವನ್ನು ಪರಿಚಯಿಸುವ ಯಾವುದೇ ಯೋಜನೆಗಳಿಲ್ಲ ಎಂದು NHAI ಮತ್ತು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸ್ಪಷ್ಟಪಡಿಸಿದ್ದಾರೆ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಲಾದ ಕ್ಲೇಮ್ ಸುಳ್ಳು.
ಮೊದಲನೆಯದಾಗಿ, ಈ ವಿಷಯಕ್ಕೆ ಸಂಬಂಧಿಸಿದಂತೆ ನಾವು ರಸ್ತೆ ಸಾರಿಗೆ & ಹೆದ್ದಾರಿ ಸಚಿವಾಲಯ ಮತ್ತು NHAI ನ ವೆಬ್‌ಸೈಟ್‌ಗಳನ್ನು ಪರಿಶೀಲಿಸಿದಾಗ, ದ್ವಿಚಕ್ರ ವಾಹನಗಳಿಗೆ ಟೋಲ್ ಶುಲ್ಕವನ್ನು ಜಾರಿಗೆ ತರಲಾಗುತ್ತಿದೆ ಎಂದು ಹೇಳುವ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಲಾಗಿಲ್ಲ ಎಂದು ನಾವು ಕಂಡುಕೊಂಡಿದ್ದೇವೆ.
ಆದರೆ ಈಗ, ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ವದಂತಿಗಳು ಹರಡಿದ ನಂತರ, NHAI ಈ ವಿಷಯಕ್ಕೆ ಪ್ರತಿಕ್ರಿಯಿಸಿದೆ (ಆರ್ಕೈವ್) ಮತ್ತು ದ್ವಿಚಕ್ರ ವಾಹನಗಳಿಗೆ ಟೋಲ್ ಶುಲ್ಕವನ್ನು ಪರಿಚಯಿಸುವ ಯಾವುದೇ ಯೋಜನೆಗಳಿಲ್ಲ. ಕೆಲವು ಮಾಧ್ಯಮ ಸಂಸ್ಥೆಗಳು ಸುಳ್ಳು ಪ್ರಚಾರವನ್ನು ಹರಡುತ್ತಿವೆ ಎಂದು ಸ್ಪಷ್ಟಪಡಿಸಿದೆ.
ಅಲ್ಲದೆ, ದ್ವಿಚಕ್ರ ವಾಹನಗಳ ಮೇಲೆ ಟೋಲ್ ಶುಲ್ಕ ವಿಧಿಸುವ ಯಾವುದೇ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿಲ್ಲ. ದ್ವಿಚಕ್ರ ವಾಹನಗಳಿಗೆ ಟೋಲ್ ವಿನಾಯಿತಿ ಎಂದಿನಂತೆ ಮುಂದುವರಿಯುತ್ತದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸ್ಪಷ್ಟಪಡಿಸಿದ್ದಾರೆ.
THE NATIONAL HIGHWAYS FEE (DETERMINATION OF RATES AND COLLECTION) RULES, 2008 (ರಾಷ್ಟ್ರೀಯ ಹೆದ್ದಾರಿ ಶುಲ್ಕ (ದರಗಳು ಮತ್ತು ಸಂಗ್ರಹದ ನಿರ್ಣಯ) ನಿಯಮಗಳು, 2008) ಪ್ರಕಾರ ದ್ವಿಚಕ್ರ ವಾಹನಗಳಿಗೆ ಟೋಲ್ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಕೊನೆಯದಾಗಿ ಹೇಳುವುದಾದರೆ, ಜುಲೈ 15, 2025 ರಿಂದ ದ್ವಿಚಕ್ರ ವಾಹನ ಸವಾರರು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಯಾಣಿಸಲು ಟೋಲ್ ಶುಲ್ಕವನ್ನು ಪಾವತಿಸಬೇಕಾಗುತ್ತದೆ ಎಂದು ಸರ್ಕಾರ ಘೋಷಿಸಿಲ್ಲ ಬದಲಿಗೆ ಇದೊಂದು ಫೇಕ್ ನ್ಯೂಸ್.