ಬ್ಲೂ ಫ್ಲ್ಯಾಗ್ಸ್ ಮತ್ತು ಕಾಲುವುಗಳನ್ನು ಹಿಡಿದು ಜನರ ಗುಂಪೊಂದು ರಸ್ತೆಯ ಬದಿಯಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಆವೃತರಾಗಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಈ ಘಟನೆಯನ್ನು ಮುಸ್ಲಿಂ ಮತೀಯರು ಅಂಬೇಡ್ಕರ್ ಜಯಂತಿ ಶೋಭಾ ಯಾತ್ರೆಯನ್ನು ತಡೆದಿದ್ದಾರೆ ಎಂದು ಪೋಸ್ಟ್ನಲ್ಲಿ ವಿವರಿಸಲಾಗಿದೆ. ಹಾಗಾದರೆ ಈ ಪೋಸ್ಟ್ ನಲ್ಲಿ ಮಾಡಿದ ಕ್ಲೈಮ್ ಅನ್ನು ಪರಿಶೀಲಿಸೋಣ.
ಕ್ಲೇಮ್ : ಅಂಬೇಡ್ಕರ್ ಜಯಂತಿ ಆಚರಣೆಗೆ ಮುಸ್ಲಿಮರು ಇಟ್ಟಿಗೆ ಮತ್ತು ಕಲ್ಲು ತೂರಾಟ ನಡೆಸುವ ದೃಶ್ಯಗಳು.
ಫ್ಯಾಕ್ಟ್: ಈ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ಏಪ್ರಿಲ್ 14, 2023 ರಂದು ಸಂಭವಿಸಿದೆ. ಭಾರತಿಯಾ ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಶೋಭಾ ಯಾತ್ರೆಯಲ್ಲಿ ಭಾಗವಹಿಸಿದ್ದ ಜನರ ಮೇಲೆ ಕಲ್ಲು ತೂರಲಾಗಿದೆ ಎಂದು ವರದಿಯಾಗಿದೆ. ಈ ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ಪೊಲೀಸರು ಸ್ಥಳಕ್ಕೆ ತಲುಪಿ ಶಾಂತಿಯನ್ನು ಪುನಃಸ್ಥಾಪಿಸಿದರು ಮತ್ತು ಎಫ್ಐಆರ್ ದಾಖಲಿಸಲಾಗಿದೆ. ಎಫ್ಐಆರ್ನಲ್ಲರುವ ವ್ಯಕ್ತಿಗಳು ಯಾರು ಮುಸ್ಲಿಮರಲ್ಲ. ಆದ್ದರಿಂದ ಪೋಸ್ಟ್ ನಲ್ಲಿ ಮಾಡಿದ ಕ್ಲೇಮ್ ಸುಳ್ಳು.
ಪೋಸ್ಟ್ ಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳನ್ನು ತಿಳಿಯಲು ನಾವು ಆನ್ಲೈನ್ನಲ್ಲಿ ಹುಡುಕಾಡಿದಾಗ ಈ ಘಟನೆಯ ಬಗ್ಗೆ ಹಲವಾರು ಸುದ್ದಿ ವರದಿಗಳಿಗೆ ಕಾರಣವಾಯಿತು. ಟೈಮ್ಸ್ ಆಫ್ ಇಂಡಿಯಾ ಮತ್ತು ಟಿವಿ 9 ಪ್ರಕಾರ, ಈ ಘಟನೆ ಏಪ್ರಿಲ್ 14 2023 ರಂದು ಮಥುರಾದ ಭಾರತೀಯ ಗ್ರಾಮದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಮೆರವಣಿಗೆ / ಶೋಭಾ ಯಾತ್ರೆಯ ಸಮಯದಲ್ಲಿ ಸಂಭವಿಸಿದೆ. ಮೆರವಣಿಗೆಯಲ್ಲಿ ಭಾಗವಹಿಸಿದ ಜನರ ಮೇಲೆ ಕಲ್ಲುಗಳನ್ನು ಎಸೆಯಲಾಯಿತು ಎಂದು ವರದಿಯಲ್ಲಿ ತಿಳಿಸಲಾಗಿದೆ.
”ಪೊಲೀಸರ ಪ್ರಕಾರ, ಠಾಕೂರ್ ಸಮುದಾಯದ ಜನರ ಗುಂಪು ಅಂಬೇಡ್ಕರ್ ಜಯಂತಿ ಮೆರವಣಿಗೆಯನ್ನು ಜಾತವ್ ಸಮುದಾಯದ ಜನರು ನಡೆಸುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದರು” ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ತಮ್ಮ ಮನೆಗಳ ಮೂಲಕ ಹಾದುಹೋಗುವ ಮೆರವಣಿಗೆಯನ್ನು ಪುರುಷರ ಗುಂಪು ವಿರೋಧಿಸಿತು ಮತ್ತು ಅವರ ವಿರುದ್ಧ ಜಾತಿ ನಿಂದನೆಗಳನ್ನು ಮಾಡಿ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಗ್ರಾಮದ ನಿವಾಸಿಯೊಬ್ಬರು ಟೈಮ್ಸ್ ಆಫ್ ಇಂಡಿಯಾಗೆ ತಿಳಿಸಿದರು.
ಪೊಲೀಸರು ಸ್ಥಳಕ್ಕೆ ತಲುಪಿ ಶಾಂತಿಯನ್ನು ಪುನಃಸ್ಥಾಪಿಸಿ, ಎಫ್ಐಆರ್ ದಾಖಲಿಸಿದ್ದಾರೆ. ಎಫ್ಐಆರ್ನಲ್ಲಿ ಉಲ್ಲೇಖಿಸಲಾದ ಮೂವರನ್ನು ಸಹ ಬಂಧಿಸಲಾಗಿದೆ. ನಾವು ಎಫ್ಐಆರ್ನ ಪ್ರತಿಯನ್ನು ಪಡೆದುಕೊಂಡಿದ್ದು, ಅದರಲ್ಲಿ ಹೆಸರಿಸಲಾದ ಯಾವುದೇ ಆರೋಪಿಗಳು ಮುಸ್ಲಿಮರಲ್ಲ ಎಂದು ಕಂಡುಕೊಂಡಿದ್ದೇವೆ. ಆ ದಿನ ಮುಸ್ಲಿಮರು ಕಲ್ಲು ತೂರಾಟ ನಡೆಸಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಲು, ನಾವು ಜೈತ್ ಪೊಲೀಸ್ ಠಾಣೆಯ ಎಸ್ಎಚ್ಒ ಅಜಯ್ ವರ್ಮಾ ಅವರೊಂದಿಗೆ ಮಾತನಾಡಿದ್ದೇವೆ, ಅವರು ”ಈ ಕಲ್ಲು ತೂರಾಟ ಘಟನೆಯಲ್ಲಿ ಭಾಗಿಯಾಗಿರುವವರಲ್ಲಿ ಯಾರೂ ಮುಸ್ಲಿಮರಲ್ಲ” ಎಂದು ಹೇಳಿದರು.
ಒಟ್ಟಾರೆಯಾಗಿ ಹೇಳುವುದಾದರೆ, ಮಥುರಾದಲ್ಲಿ ಅಂಬೇಡ್ಕರ್ ಜಯಂತಿ ಶೋಭಾ ಯಾತ್ರೆಯ ಸಂದರ್ಭದಲ್ಲಿ ನಡೆದ ಕಲ್ಲು ತೂರಾಟ ಘಟನೆಯಲ್ಲಿ ಯಾವುದೇ ಮುಸ್ಲಿಮರು ಭಾಗಿಯಾಗಿಲ್ಲ.