ಆಮ್ಲಜನಕದ ಬಗ್ಗೆ ಬೋಧಿಸುವ ಬಾಬಾ ರಾಮ್‌ದೇವ್‌ರವರು ಸ್ವತಃ ಆಸ್ಪತ್ರೆಗೆ ದಾಖಲಾಗಿ ವೆಂಟಿಲೇಟರ್ ಬೆಂಬಲದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಪ್ರತಿಪಾದನೆಯೊಂದಿಗೆ ಪೋಸ್ಟ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಪೋಸ್ಟ್‌ನಲ್ಲಿ ಬಾಬಾ ರಾಮ್‌ದೇವ್‌ರವರ ಸುತ್ತಾ ಜನರು ಸುತ್ತುವರಿದಿದ್ದು ಇದು ಅವರ ಪ್ರಸ್ತುತ ಪರಿಸ್ಥಿತಿ ಎಂದು ಬರೆಯಲಾಗಿದೆ. ಇದು ನಿಜವೇ ಪರಿಶೀಲಿಸೋಣ.
ಪ್ರತಿಪಾದನೆ: ಬಾಬಾ ರಾಮ್‌ದೇವ್‌ರವರು ಸ್ವತಃ ಆಸ್ಪತ್ರೆಗೆ ದಾಖಲಾಗಿ ವೆಂಟಿಲೇಟರ್ ಬೆಂಬಲದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿಜಾಂಶ: ಇದು 2011 ರ ಹಳೆಯ ಚಿತ್ರವಾಗಿದೆ. ಆಗ ಭ್ರಷ್ಟಾಚಾರ ಮತ್ತು ಕಪ್ಪುಹಣದ ವಿರುದ್ಧ ಒಂಬತ್ತು ದಿನಗಳ ಉಪವಾಸ ಸತ್ಯಾಗ್ರಹದ ನಂತರ ಬಾಬಾ ರಾಮ್‌ದೇವ್ ಅವರನ್ನು ಡೆಹ್ರಾಡೂನ್‌ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿ ವೆಂಟಿಲೇಟರ್ ಬೆಂಬಲದಲ್ಲಿದ್ದಾರೆ ಎಂದು ಹೇಳುವ ಯಾವುದೇ ಇತ್ತೀಚಿನ ಸುದ್ದಿ ಲೇಖನಗಳು ಅಥವಾ ಯಾವುದೇ ಮಾಹಿತಿಯಿಲ್ಲ. ಆದ್ದರಿಂದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪು ದಾರಿಗೆಳೆಯುವಂತಿದೆ.
ಪೋಸ್ಟ್‌ನಲ್ಲಿನ ಫೋಟೊವನ್ನು ಗೂಗಲ್ ಇಮೇಜ್ ಸರ್ಚ್ ಮೂಲಕ ಹುಡುಕಿದಾಗ ಇದೇ ಫೋಟೊ ಇಂಡಿಯಾ ಟುಡೆ ಪ್ರಕಟಿಸಿದ ಲೇಖನದ ಫೋಟೊ ಕೊಲಾಜ್‌ನಲ್ಲಿ ಕಂಡುಬಂದಿದೆ. ಅದರಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿರುವ ಹಲವು ಫೋಟೊಗಳ ಸಹ ಇವೆ. “ಬಾಬಾ ರಾಮದೇವ್ ಅವರು 2011 ರ ಜೂನ್‌ನಲ್ಲಿ ಕಪ್ಪು ಹಣ ಮತ್ತು ಭ್ರಷ್ಟಾಚಾರದ ವಿರುದ್ಧ ಒಂಬತ್ತು ದಿನಗಳ ಕಾಲ ಉಪವಾಸ ಸತ್ಯಾಗ್ರಹ ಮಾಡಿದರು. ಅವರ ಆರೋಗ್ಯದ ಹದಗೆಟ್ಟ ನಂತರ ಅವರನ್ನು ಡೆಹ್ರಾಡೂನ್‌ನ ಆಸ್ಪತ್ರೆಗೆ ದಾಖಲಿಸಲಾಯಿತು, ಅಲ್ಲಿ ಅವರು ಧಾರ್ಮಿಕ ಮತ್ತು ಆಧ್ಯಾತ್ಮಿಕ ನಾಯಕರ ಸಮ್ಮುಖದಲ್ಲಿ ಉಪವಾಸವನ್ನು ಕೊನೆಗೊಳಿಸಲಾಯಿತು” ಎಂದು ವಿವರಣೆಯಲ್ಲಿ ತಿಳಿಸಲಾಗಿದೆ. ಹಾಗಾಗಿ ಈ ಫೋಟೊ ಉಪವಾಸ ಸತ್ಯಾಗ್ರಹಕ್ಕೆ ಸಂಬಂಧಿಸಿದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಗೂಗಲ್‌ನಲ್ಲಿ ಮತ್ತಷ್ಟು ಹುಡುಕಿದಾಗ 2011 ರಲ್ಲಿ ಬಾಬಾ ರಾಮದೇವ್ ಅವರ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ ಅನೇಕ ಸುದ್ದಿ ಲೇಖನಗಳು ಕಂಡುಬಂದಿವೆ. ಬಾಬಾ ರಾಮದೇವ್ ಅವರು ಆಸ್ಪತ್ರೆಯಲ್ಲಿ ಉಪವಾಸ ಸತ್ಯಾಗ್ರಹವನ್ನು ಮುರಿದ ಚಿತ್ರಗಳನ್ನು ಪ್ರಕಟಿಸಿದ ಲೇಖನವನ್ನು ಇಲ್ಲಿ ಕಾಣಬಹುದು. ಘಟನೆಯನ್ನು ವರದಿ ಮಾಡಿದ ಇತರ ಸುದ್ದಿ ಲೇಖನಗಳನ್ನು ಇಲ್ಲಿ ಮತ್ತು ಇಲ್ಲಿ ಓದಬಹುದು.
ಬಾಬಾ ರಾಮ್‌ದೇವ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಯಾವುದೇ ಇತ್ತೀಚಿನ ಸುದ್ದಿ ಲೇಖನಗಳು ಕಂಡುಬಂದಿಲ್ಲ. ಅಲ್ಲದೇ ಅವರು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಕ್ರಿಯಾಶೀಲರಾಗಿದ್ದು ಅವರ ಇತ್ತೀಚಿನ ಯೋಗ ವಿಡಿಯೋಗಳನ್ನು ಅಪ್ಲೋಡ್ ಮಾಡುತ್ತಿದ್ದಾರೆ.
ಒಟ್ಟಿನಲ್ಲಿ ಬಾಬಾ ರಾಮ್‌ದೇವ್‌ರವರು ವೆಂಟಿಲೇಟರ್ ಇರುವ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ಹಳೆಯ ಚಿತ್ರವನ್ನು ಹಂಚಿಕೊಳ್ಳಲಾಗಿದೆ.