Fake News - Kannada
 

ಮಲ್ಲಿಕಾರ್ಜುನ ಖರ್ಗೆ ಅವರ ಹಳೆಯ ಭಾಷಣವನ್ನು ಇತ್ತೀಚನದ್ದು ಎಂದು ತಪ್ಪಾಗಿ ಹಂಚಿಕೆ

0

“ಮೋದಿ ಅಧಿಕಾರಕ್ಕೆ ಬಂದರೆ, ಸನಾತನ ಧರ್ಮ ಮತ್ತು ಆರೆಸ್ಸೆಸ್ ಆಳ್ವಿಕೆ ದೇಶದಲ್ಲಿ ಮತ್ತೆ ಬರುತ್ತದೆ”. ಎಂಬ ಹೇಳಿಕೆಯನ್ನು ಮಲ್ಲಿಕಾರ್ಜುನ ಖರ್ಗೆ ಇತ್ತೀಚೆಎ ನೀಡಿದ್ದಾರೆ ಎನ್ನುವ ವಿಡಿಯೋ ಪೋಸ್ಟ್‍ವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಇತ್ತೀಚೆಗೆ ನಡೆದ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಗೆಲುವು ಸಾಧಿಸಿದ ಸಂದರ್ಭದಲ್ಲಿ ಈ ಹೇಳಿಕೆ ನೀಡಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ. ಈ ಪೋಸ್ಟ್‍ನಲ್ಲಿ ಮಾಡಲಾದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಪ್ರತಿಪಾದನೆ: ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮಲ್ಲಿಕಾರ್ಜುನ ಖರ್ಗೆಯವರು ಪ್ರಧಾನಿ ಮೋದಿಯವರ ಬಗ್ಗೆ ಮಾಡಿದ ಕಾಮೆಂಟ್‌ಗಳ ವೀಡಿಯೊ.

ನಿಜಾಂಶ: ಈ ವೀಡಿಯೊವು 04 ನವೆಂಬರ್ 2018 ರಂದು ಬಾಂದ್ರಾದಲ್ಲಿ ಮುಂಬೈ ಕಾಂಗ್ರೆಸ್ ಆಯೋಜಿಸಿದ್ದ ‘ಸಂವಿಧಾನ ರಕ್ಷಣಾ ಪರಿಷತ್ತಿನ’ ಸಂದರ್ಭದ್ದು ಎಂದು ತೋರಿಸುತ್ತದೆ. ಮಲ್ಲಿಕಾರ್ಜುನ ಖರ್ಗೆ 19 ಅಕ್ಟೋಬರ್ 2022 ರಂದು ನಡೆದ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ ನಂತರ ಈ ಮಾತುಗಳನ್ನು ಆಡಿಲ್ಲ. ಹಾಗಾಗಿ ಪೋಸ್ಟ್‍ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ಸಂಬಂಧಿತ ಕೀವರ್ಡ್‌ಗಳೊಂದಿಗೆ ಗೂಗಲ್ ಸರ್ಚ್ ಮಾಡಿದಾಗ 06 ನವೆಂಬರ್ 2018 ರಂದು ‘ಯುಪಿ ತಕ್’ ಯು ಯೂಟ್ಯೂಬ್‌ ಚಾನೆಲ್‍ನಲ್ಲಿ ಅಪ್‌ಲೋಡ್ ಮಾಡಿದ ಈ ವೀಡಿಯೊದ ವಿಸ್ತೃತ ಆವೃತ್ತಿಯು “ಸನಾತನ ಆಡಳಿತದಿಂದ ಕಾಂಗ್ರೆಸ್ ತೊಂದರೆಗೀಡಾಗಿದೆಯೇ?” ಎಂಬ ಶೀರ್ಷಿಕೆಯೊಂದಿಗೆ ಪ್ರಸಾರ ಮಾಡಿರುವುದು ಕಂಡುಬಂದಿದೆ.

Zee News ಪ್ರಕಾರ, 04 ನವೆಂಬರ್ 2018 ರಂದು ಬಾಂದ್ರಾದಲ್ಲಿ ಮುಂಬೈ ಕಾಂಗ್ರೆಸ್ ಆಯೋಜಿಸಿದ್ದ ‘ಸಂವಿಧಾನ ರಕ್ಷಣಾ ಮಂಡಳಿ’ಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಭಾಷಣದಲ್ಲಿ ಈ ಹೇಳಿಕೆಗಳನ್ನು ನೀಡಿದ್ದಾರೆ. ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಅವರು 06 ನವೆಂಬರ್ 2018 ರಂದು ಟ್ವಿಟರ್ ಮೂಲಕ ಈ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಹಳೆಯ ವಿಡಿಯೋವನ್ನು ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ ನಂತರ ಮಾಡಿದ ಇತ್ತೀಚಿನ ಭಾಷಣ ಎಂದು ಹಂಚಿಕೊಂಡಿದ್ದಾರೆ.

Share.

Comments are closed.

scroll