ಗೃಹ ಸಚಿವ ಅಮಿತ್ ಶಾ ಮತ್ತು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹರಿದ್ವಾರದ ಕುಂಭಮೇಳದಲ್ಲಿ ಮಾಸ್ಕ್ ಧರಿಸದೇ ಪವಿತ್ರ ಸ್ನಾನ ಮಾಡುತ್ತಿದ್ದಾರೆ ಎಂದು ಪ್ರತಿಪಾದಿಸಿ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ದೇಶದಲ್ಲಿ ಕೋವಿಡ್ 19 ಪ್ರಕರಣಗಳಲ್ಲಿ ತೀವ್ರ ಏರಿಕೆಯಾದ ಹಿನ್ನೆಲೆಯಲ್ಲಿ ಈ ಫೋಟೊ ಸಾಕಷ್ಟು ಸಂಖ್ಯೆಯಲ್ಲಿ ಹಂಚಿಕೆಯಾಗುತ್ತಿದೆ. ಇದು ನಿಜವೆ ಪರಿಶೀಲಿಸೋಣ.
ಪ್ರತಿಪಾದನೆ: ಗೃಹ ಸಚಿವ ಅಮಿತ್ ಶಾ ಮತ್ತು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹರಿದ್ವಾರದ ಕುಂಭಮೇಳದಲ್ಲಿ ಮಾಸ್ಕ್ ಧರಿಸದೇ ಪವಿತ್ರ ಸ್ನಾನ ಮಾಡುತ್ತಿದ್ದಾರೆ.
ನಿಜಾಂಶ: ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ಫೋಟೊ ಹಳೆಯದಾಗಿದೆ. ಈ ಫೋಟೊವು 2019ರಲ್ಲಿ ಪ್ರಯಾಗ್‌ರಾಜ್‌ನಲ್ಲಿ ನಡೆದ ಕುಂಭಮೇಳದಲ್ಲಿ ಅಮಿತ್ ಶಾ, ಯೋಗಿ ಆದಿತ್ಯನಾಥ್ ಪವಿತ್ರ ಸ್ನಾನ ಮಾಡುತ್ತಿರುವುದಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.
ಸಂಬಂಧಿಸಿದ ಕೀವರ್ಡ್‌ಗಳನ್ನು ಬಳಸಿ ಫೋಟೊವನ್ನು ಹುಡುಕಿದಾಗಿ ಇದೇ ರೀತಿಯ ಹಲವು ಫೋಟೊಗಳು ನ್ಯೂಸ್ 18 ಪ್ರಕಟಿಸಿದ ವರದಿಯಲ್ಲಿ ಕಂಡುಬಂದಿವೆ. ‘ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮತ್ತು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ 2019ರ ಪ್ರಯಾಗ್ ರಾಜ್ ಕುಂಭಮೇಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪವಿತ್ರ ಸ್ನಾನ ಮಾಡುತ್ತಿರುವುದು’ ಎಂಬ ವಿವರಣೆಯಡಿಯಲ್ಲಿ ಈ ಫೋಟೊವನ್ನು ಪ್ರಕಟಿಸಲಾಗಿದೆ. ಹಾಗಾಗಿ ಈ ಫೋಟೊವನ್ನು 2019ರ ಪ್ರಯಾಗ್‌ರಾಜ್ ಕುಂಭಮೇಳದಲ್ಲಿ ತೆಗೆದ ಫೋಟೊವಾಗಿದೆ.
ಪ್ರಯಾಗ್‌ರಾಜ್ ಕುಂಭಮೇಳದಲ್ಲಿ ಅಮಿತ್ ಶಾ, ಯೋಗಿ ಆದಿತ್ಯನಾಥ್ ಪವಿತ್ರ ಸ್ನಾನ ಮಾಡಿರುವ ವರದಿಗಳು ಮತ್ತು ವಿಡಿಯೋಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.
ಒಟ್ಟಿನಲ್ಲಿ 2019ರಲ್ಲಿ ಪ್ರಯಾಗ್‌ರಾಜ್‌ನಲ್ಲಿ ನಡೆದ ಕುಂಭಮೇಳದಲ್ಲಿ ಅಮಿತ್ ಶಾ, ಯೋಗಿ ಆದಿತ್ಯನಾಥ್ ಪವಿತ್ರ ಸ್ನಾನ ಮಾಡುತ್ತಿರುವುದನ್ನು ಇತ್ತೀಚಿನ ಹರಿದ್ವಾರದ ಕುಂಭಮೇಳಕ್ಕೆ ತಪ್ಪಾಗಿ ಹೋಲಿಸಲಾಗಿದೆ.