Fake News - Kannada
 

ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಿಲ್ಲಎಂಬುವುದು ಸುಳ್ಳು

0

22 ಜನವರಿ 2024 ರಂದು ಅಯೋಧ್ಯೆ ರಾಮಮಂದಿರದಲ್ಲಿ ಭಗವಾನ್ ರಾಮನ ಪ್ರಾಣ ಪ್ರತಿಷ್ಠೆಯ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಆಹ್ವಾನ ಬಂದಿಲ್ಲ ಎಂಬ ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಇದು ಎಷ್ಟರಮಟ್ಟಿಗೆ ನಿಜ ಎಂದು ಈಗ ನೋಡೋಣ.

ಕ್ಲೇಮ್: 22 ಜನವರಿ 2024 ರಂದು ಅಯೋಧ್ಯೆ ರಾಮಮಂದಿರದಲ್ಲಿ ನಡೆಯಲಿರುವ ಶ್ರೀರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಆಹ್ವಾನ ಬಂದಿಲ್ಲ.

ಫ್ಯಾಕ್ಟ್: ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಅಲೋಕ್ ಕುಮಾರ್, ದೇವಾಲಯ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಮತ್ತು ಆರ್‌ಎಸ್‌ಎಸ್ ಮುಖಂಡ ರಾಮ್ ಲಾಲ್ ಅವರು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ 12 ಜನವರಿ 2024 ರಂದು ಆಹ್ವಾನ ಪತ್ರವನ್ನು ಹಸ್ತಾಂತರಿಸಿದರು.ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಕ್ಲೇಮ್  ತಪ್ಪಾಗಿದೆ.

ಮೊದಲಿಗೆ, ಅಧ್ಯಕ್ಷೆ ದ್ರೌಪದಿ ಮುರ್ಮು ಅವರಿಗೆ ಅಯೋಧ್ಯೆ ರಾಮಮಂದಿರ ಟ್ರಸ್ಟ್‌ನಿಂದ ಆಹ್ವಾನ ಬಂದಿದೆಯೇ ಎಂದು ಇಂಟರ್ನೆಟ್‌ನಲ್ಲಿ ಹುಡುಕಿದಾಗ, ಅದರ ಬಗ್ಗೆ ಸುದ್ದಿಯನ್ನು ದಿ ಹಿಂದೂ, ಇಂಡಿಯನ್ ಎಕ್ಸ್‌ಪ್ರೆಸ್ ಮತ್ತು ಇತರ ಸುದ್ದಿ ಪತ್ರಿಕೆಗಳಲ್ಲಿ ಪ್ರಕಟಿಸಲಾಗಿದೆ.

ಈ ವರದಿಗಳ ಪ್ರಕಾರ, 12 ಜನವರಿ 2024 ರಂದು, ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಅಲೋಕ್ ಕುಮಾರ್, ದೇವಾಲಯ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಮತ್ತು ಆರ್‌ಎಸ್‌ಎಸ್ ಮುಖಂಡ ರಾಮ್ ಲಾಲ್ ಅವರು ಅಯೋಧ್ಯೆ ರಾಮಮಂದಿರದ ಉದ್ಘಾಟನೆಯ ಆಮಂತ್ರಣ ಪತ್ರವನ್ನು ರಾಷ್ಟ್ರಪತಿ ಮುರ್ಮು ಅವರಿಗೆ ಹಸ್ತಾಂತರಿಸಿದರು. ವಿಶ್ವ ಹಿಂದೂ ಪರಿಷತ್ ಕೂಡ ತಮ್ಮ ಅಧಿಕೃತ ಟ್ವಿಟರ್ ಖಾತೆಯ ಮೂಲಕ ಇದನ್ನೇ ಹೇಳಿಕೊಂಡಿದೆ.

ಕೊನೆಗೂ ಅಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ರಾಷ್ಟ್ರಪತಿಗಳು ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಿಲ್ಲ ಎಂಬ ಮಾತು ಸುಳ್ಳಾಗಿದೆ.

Share.

Comments are closed.

scroll