ದೇಶದ ಪ್ರತಿಷ್ಠಿತ ಮಾಧ್ಯಮ ಸಂಸ್ಥೆ ಎನ್‌ಡಿಟಿವಿಯ 29.18% ಶೇರು ಪಾಲನ್ನು ಅದಾನಿ ಗ್ರೂಪ್ ಪಡೆದುಕೊಂಡಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಜೊತೆಗೆ ಇನ್ನೂ 26% ಶೇರು ಪಡೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ NDTV ಇಂಡಿಯಾದ ಹಿರಿಯ ಕಾರ್ಯನಿರ್ವಾಹಕ ಸಂಪಾದಕ ರವೀಶ್ ಕುಮಾರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್‌ಗಳನ್ನು ಹಂಚಿಕೊಳ್ಳಲಾಗಿದೆ.
ಪ್ರತಿಪಾದನೆ : ಎನ್‌ಡಿಟಿವಿ ಲಿಮಿಟೆಡ್‌ನಲ್ಲಿ ಅದಾನಿ ಗ್ರೂಪ್ 29.18% ಪಾಲನ್ನು ಸ್ವಾಧೀನಪಡಿಸಿಕೊಂಡ ನಂತರ ‘ಎನ್‌ಡಿಟಿವಿ ಇಂಡಿಯಾ’ ಕಾರ್ಯನಿರ್ವಾಹಕ ಸಂಪಾದಕ ರವೀಶ್ ಕುಮಾರ್ ರಾಜಿನಾಮೆ ನೀಡಿದ್ದಾರೆ.
ನಿಜಾಂಶ : 24 ಆಗಸ್ಟ್ 2022 ರಂದು ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಿಂದ ರವೀಶ್ ಕುಮಾರ್ ಟ್ವೀಟ್ ಮಾಡಿದ್ದು, ಅವರು ತಮ್ಮ ರಾಜೀನಾಮೆ ಬಗ್ಗೆ ಇರುವ ವದಂತಿಗಳ ಬಗ್ಗೆ ಸ್ಪಷ್ಟನೆ ನೀಡಿದ್ದು, ಇದು ಕೇವಲ ಊಹಾಪೋಹಗಳು ಎಂದು ಟ್ವೀಟರ್‌ನಲ್ಲಿ ತಿಳಿಸಿದ್ದಾರೆ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ
ಅದಾನಿ ಗ್ರೂಪ್ NDTVಯ ಶೇರುಗಳನ್ನು ಪಡೆದುಕೊಂಡ ಬೆನ್ನಲ್ಲೆ, ಸಾಮಾಜಿಕ ಮಾಧ್ಯಮಗಳಲ್ಲಿ ರವೀಶ್ ಕುಮಾರ್ ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಈ ಕುರಿತು ರವೀಶ್ ಕುಮಾರ್ ಅವರೇ ಸ್ಪಷ್ಟನೆ ನೀಡಿದ್ದಾರೆ. ಸಂಬಂಧಿತ ಕೀವರ್ಡ್‌ಗಳೊಂದಿಗೆ ಗೂಗಲ್ ಸರ್ಚ್ ಮಾಡಿದಾಗ 24 ಆಗಸ್ಟ್ 2022 ರಂದು ರವೀಶ್ ಕುಮಾರ್ ಅವರ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಮಾಡಿದ ಟ್ವೀಟ್ ಲಭ್ಯವಾಗಿದ್ದು ಈ ಟ್ವೀಟ್‌ನಲ್ಲಿ, ಅವರು ತಮ್ಮ ರಾಜೀನಾಮೆಯ ಊಹಾಪೋಹಗಳು ಕೇವಲ ವದಂತಿಗಳು ಎಂದು ಸ್ಪಷ್ಟಪಡಿಸಿದ್ದಾರೆ.
ಇದೇ ವಿಷಯಕ್ಕೆ ಸಂಬಂಧಿಸಿದಂತೆ ಪತ್ರಿಕೆಗಳ ವರದಿಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು
ಒಟ್ಟಾರೆಯಾಗಿ ಹೇಳುವುದಾದರೆ, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವಂತೆ ಅದಾನಿ ಗ್ರೂಪ್ NDTVಯ ಷೇರು ಖರೀದಿಸಿದಕ್ಕೆ ರವೀಶ್ ಕುಮಾರ್ ಅವರು ರಾಜಿನಾಮೆ ನೀಡಿದ್ದಾರೆ ಎಂಬುದು ಸುಳ್ಳು. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.