Fake News - Kannada
 

ಶೂಟರ್ ಶ್ರೇಯಾಸಿ ಸಿಂಗ್‌ ರನ್ನು ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಪುತ್ರಿ ಎಂದು ತಪ್ಪಾಗಿ ಚಿತ್ರಿಸಲಾಗಿದೆ

0

ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಧ್ಯಪ್ರದೇಶದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ಅವರ ಪುತ್ರಿ ಶ್ರೇಯಾಸಿ ಸಿಂಗ್ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹರಿದಾಡುತ್ತಿದೆ. ಹಲವಾರು ಜನರು ಬಿಜೆಪಿಗೆ ಸೇರುತ್ತಿರುವ ಶ್ರೇಯಾಸಿ ಸಿಂಗ್ ಅವರ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಲೇಖನದಲ್ಲಿ ಪೋಸ್ಟ್‌ನಲ್ಲಿ ಮಾಡಿರುವ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಪೋಸ್ಟ್‌ನ ಆರ್ಕೈವ್ ಮಾಡಲಾದ ಆವೃತ್ತಿ ಇಲ್ಲಿದೆ.

ಪ್ರತಿಪಾದನೆ: ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಅವರ ಪುತ್ರಿ ಬಿಜೆಪಿಗೆ ಸೇರಿದರು.

ಸತ್ಯಾಂಶ: ವೈರಲ್ ಪೋಸ್ಟ್‌ನಲ್ಲಿರುವ ಫೋಟೋ ಮಾಜಿ ಕೇಂದ್ರ ಸಚಿವ ದಿಗ್ವಿಜಯ್ ಸಿಂಗ್ ಅವರ ಪುತ್ರಿ ಶ್ರೇಯಾಸಿ ಸಿಂಗ್ ಅವರಾಗಿದ್ದಾರೆ. ಅವರು ಕಾಂಗ್ರೆಸ್ ಮುಖಂಡ ದಿಗ್ವಿಜಯ ಸಿಂಗ್ ಅವರ ಮಗಳಲ್ಲ. ದಿವಂಗತ ದಿಗ್ವಿಜಯ್ ಸಿಂಗ್ ಅವರು ಚಂದ್ರಶೇಖರ್ ಮತ್ತು ಅಟಲ್ ಬಿಹಾರಿ ವಾಜಪೇಯಿ ಸರ್ಕಾರಗಳ ಅಡಿಯಲ್ಲಿ ಕೇಂದ್ರ ಸಚಿವ ಸಚಿವ ಸಂಪುಟ ಸದಸ್ಯರಾಗಿದ್ದರು. ಶೂಟರ್ ಶ್ರೇಯಾಸಿ ಸಿಂಗ್ ಅವರಿಗೆ ಕಾಂಗ್ರೆಸ್ ಮುಖಂಡ ದಿಗ್ವಿಜಯ ಸಿಂಗ್ ಅವರೊಂದಿಗೆ ಯಾವುದೇ ಸಂಬಂಧವಿಲ್ಲ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಪೋಸ್ಟ್‌ನಲ್ಲಿರುವ ಆರೋಪಗಳಿಗೆ ಸಂಬಂಧಿಸಿದ ಮಾಹಿತಿಗಾಗಿ ಹುಡುಕಿದಾಗ, ಶೂಟರ್ ಶೆಯಾಸಿ ಸಿಂಗ್ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರಿರುವ ಬಗ್ಗೆ ಪ್ರಕಟವಾದ ಹಲವಾರು ವರದಿಗಳು ಅಂತರ್ಜಾಲದಲ್ಲಿ ಕಂಡುಬಂದಿವೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ಕಾಣಬಹುದು. ಈ ವರದಿಗಳಲ್ಲಿ ಶೂಟರ್ ಶ್ರೇಯಸಿ ಸಿಂಗ್ ಅವರನ್ನು ಮಾಜಿ ಕೇಂದ್ರ ಸಚಿವ ದಿವಂಗತ ದಿಗ್ವಿಜಯ್ ಸಿಂಗ್ ಅವರ ಪುತ್ರಿ ಎಂದು ಉಲ್ಲೇಖಿಸಿದ್ದಾರೆ. ದಿಗ್ವಿಜಯ್ ಸಿಂಗ್ ಬಿಹಾರ ಮೂಲದ ರಾಜಕಾರಣಿ ಮತ್ತು ಜನತಾದಳ ಜೆಡಿಯು ಪಕ್ಷದ ಮಾಜಿ ನಾಯಕರಾಗಿದ್ದಾರೆ. ಅವರು ಚಂದ್ರಶೇಖರ್ ಮತ್ತು ಅಟಲ್ ಬಿಹಾರಿ ವಾಜಪೇಯಿ ಸರ್ಕಾರಗಳ ಅಡಿಯಲ್ಲಿ ಕೇಂದ್ರ ಸಚಿವ ಸಂಪುಟ ಸದಸ್ಯರಾಗಿದ್ದರು.

ಹಿರಿಯ ಕಾಂಗ್ರೆಸ್ ಮುಖಂಡ, ಮಧ್ಯಪ್ರದೇಶದ ಮಾಜಿ ಸಿಎಂ ಮತ್ತು ಹಾಲಿ ರಾಜ್ಯಸಭಾ ಸದಸ್ಯ ದಿಗ್ವಿಜಯ ಸಿಂಗ್ ಅವರಿಗೆ ಶ್ರೇಯಾಸಿ ಸಿಂಗ್ ಎಂಬ ಹೆಸರಿನ ಮಗಳೆ ಇಲ್ಲ. ”ಅವರಿಗೂ ಶೂಟರ್‌ ಶ್ರೇಯಸಿಯೊಂದಿಗೆ ಯಾವುದೇ ಸಂಬಂಧವಿಲ್ಲ. ದಿಗ್ವಿಜಯ ಸಿಂಗ್ ತಮ್ಮ ಫೇಸ್‌ಬುಕ್ ಪೋಸ್ಟ್‌ನಲ್ಲಿ ಶ್ರೇಯಸಿ ಸಿಂಗ್‌ ತಮ್ಮ ಮಗಳಲ್ಲ ಮತ್ತು ಅವರ ಮಗಳು ಬಿಜೆಪಿಗೆ ಸೇರುವ ಈ ಎಲ್ಲಾ ಪ್ರತಿಪಾದನೆ ಸುಳ್ಳು ಎಂದು ಹೇಳಿದ್ದಾರೆ. ಅದರ ಕುರಿತು ಅವರ ಟ್ವೀಟ್ ಅನ್ನು ಸಹ ಇಲ್ಲಿ ಕಾಣಬಹುದು.

ಒಟ್ಟಾರೆಯಾಗಿ ಹೇಳುವುದಾದರೆ, ಕೇಂದ್ರದ ಮಾಜಿ ಸಚಿವ ದಿಗ್ವಿಜಯ್ ಸಿಂಗ್ ಅವರ ಪುತ್ರಿ ಶ್ರೇಯಾಸಿ ಸಿಂಗ್ ಅವರನ್ನು ಕಾಂಗ್ರೆಸ್ ಮುಖಂಡ ದಿಗ್ವಿಜಯ ಸಿಂಗ್ ಅವರ ಪುತ್ರಿ ಎಂದು ತಪ್ಪಾಗಿ ಚಿತ್ರಿಸಲಾಗಿದೆ.

Share.

Comments are closed.

scroll