Fake News - Kannada
 

ಪೊಲೀಸರ ಮೇಲೆ ಉಗುಳಿರುವ ಮಹಿಳೆ ನೆಟ್ಟ ಡಿಸೋಜಾ, ತೀಸ್ತಾ ಸೆಟಲ್ವಾಡ್ ಅಲ್ಲ

0

ಮಹಿಳೆಯೊಬ್ಬರು ಪೊಲೀಸ್ ಸಿಬ್ಬಂದಿಗೆ ಹೊಡೆಯುವ ಮತ್ತು ಉಗುಳುವ  ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದು ಜೂನ್ 26 ರಂದು ತನ್ನ ಬಂಧನದ ಸಮಯದಲ್ಲಿ ಪತ್ರಕರ್ತೆ ಮತ್ತು ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಪ್ರತಿಪಾದಿಸಲಾಗುತ್ತಿದೆ. 2002ರ ಗುಜರಾತ್ ಗಲಭೆ ಪ್ರಕರಣದಲ್ಲಿ ಸುಳ್ಳು ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದಲ್ಲಿ ಸೆಟಲ್ವಾಡ್ ಮತ್ತು ಗುಜರಾತ್ ಮಾಜಿ ಪೊಲೀಸ್ ಮಹಾನಿರ್ದೇಶಕ ಆರ್ ಬಿ ಶ್ರೀಕುಮಾರ್ ಅವರನ್ನು ಗುಜರಾತ್ ಎಟಿಎಸ್ ಕಳೆದ ತಿಂಗಳು ವಿಚಾರಣೆಗೆ ಒಳಪಡಿಸಿತ್ತು. ತೀಸ್ತಾ ಅವರನ್ನು ಪೋಲೀಸರು ಬಂಧಿಸುವ ವೇಳೆ  ಪೊಲೀಸರ ಮೇಲೆ ಉಗುಳಿದ್ದಾರೆ ಎಂದು ಪೋಸ್ಟ್‌ ನಲ್ಲಿ ಮಾಡಲಾದ ಪ್ರತಿಪಾದನೆನ್ನು ಪರಿಶೀಲಿಸೋಣ.

ಪ್ರತಿಪಾದನೆ : ತೀಸ್ತಾ ಸೆಟಲ್ವಾಡ್ ಪೊಲೀಸರ ಮೇಲೆ ಉಗುಳುವುದು ಮತ್ತು ಹಲ್ಲೆ ಮಾಡುವುದನ್ನು ವೀಡಿಯೊ ತೋರಿಸುತ್ತದೆ.

ನಿಜಾಂಶ : ಮಹಿಳೆ ಅಖಿಲ ಭಾರತ ಮಹಿಳಾ ಕಾಂಗ್ರೆಸ್‌ನ ಹಂಗಾಮಿ ಅಧ್ಯಕ್ಷೆ ನೆಟ್ಟಾ ಡಿಸೋಜಾ ಎಂದು ವೀಡಿಯೊ ಸ್ಪಷ್ಟವಾಗಿ ತೋರಿಸುತ್ತದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯದ ತನಿಖೆ ವಿರುದ್ಧ ಅವರು ಪ್ರತಿಭಟನೆ ನಡೆಸುತ್ತಿದ್ದಾಗ ಪೊಲೀಸರು ಬಂಧಿಸಲು ಮುಂದಾದಾಗ ಈ ಘಟನೆ ಜರುಗಿದೆ. ಆದ್ದರಿಂದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ವಿಡಿಯೊದ ಸ್ಕ್ರೀನ್‌ಶಾಟ್‌ಗಳನ್ನು ಬಳಸಿ ಗೂಗಲ್ ಸರ್ಚ್ ಮಾಡಿದಾಗ ಘಟನೆ ಕುರಿತು  ಹಲವು ಸುದ್ದಿ ವರದಿಗಳು ಲಭ್ಯವಾಗಿವೆ. ವರದಿಗಳ ಪ್ರಕಾರ, ನ್ಯಾಷನಲ್ ಹೆರಾಲ್ಡ್ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ರಾಹುಲ್ ಗಾಂಧಿಗೆ ಸಮನ್ಸ್ ನೀಡಿದ್ದರ ವಿರುದ್ಧ ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಪ್ರತಿಭಟನೆ ವೇಳೆ ಸಂಭವಿಸಿದೆ. ಅಲ್ಲಿ ಮಹಿಳಾ ಘಟಕ ಕಾಂಗ್ರೆಸ್ ಅಧ್ಯಕ್ಷೆ ನೆಟ್ಟ ಡಿಸೋಜಾ ಅವರು ಪೊಲೀಸರ ಮೇಲೆ ಉಗುಳುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ಪ್ರತಿಭಟನಾ ನಿರತ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಲು ಯತ್ನಿಸುತ್ತಿದ್ದಾಗ ಈ ಘಟನೆ ನಡೆದಿದೆ. ನೀವು ಅವುಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ಪ್ರವೇಶಿಸಬಹುದು.

ತೀಸ್ತಾ ಸೆಟಲ್ವಾಡ್ ಅವರನ್ನು 25 ಜೂನ್ 2022 ರಂದು ಗುಜರಾತ್ ಪೊಲೀಸರ ಭಯೋತ್ಪಾದನಾ ನಿಗ್ರಹ ದಳದಿಂದ ಬಂಧಿಸಲಾಯಿತು. 2002 ರ ಗುಜರಾತ್ ಗಲಭೆ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ “ನಕಲಿ ಮತ್ತು ಸುಳ್ಳು ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ್ದಾರೆ” ಎಂದು ಪೊಲೀಸರು ಆರೋಪಿಸಿದ್ದಾರೆ.

ತೀಸ್ತಾ ಸೆಟಲ್ವಾಡ್ ಅವರ ಬಂಧನದ ವೀಡಿಯೊಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ವೀಕ್ಷಿಸಬಹುದು. ಈ ಯಾವುದೇ ವೀಡಿಯೊಗಳಲ್ಲಿಯೂ ತೀಸ್ತಾ ಸೆಟಲ್ವಾಡ್ ಆಕೆ ಪೊಲೀಸರ ಮೇಲೆ ಉಗುಳುವುದು ಕಂಡುಬರುವುದಿಲ್ಲ.

ಒಟ್ಟಾರೆಯಾಗಿ ಹೇಳುವುದಾದರೆ, ವೈರಲ್ ವೀಡಿಯೊದಲ್ಲಿರುವ ಮಹಿಳೆ ತೀಸ್ತಾ ಸೆಟಲ್ವಾಡ್ ಅಲ್ಲ , ಅದು ಕಾಂಗ್ರೆಸ್‌ನ ಮಹಿಳಾ ಘಟಕದ ಅಧ್ಯಕ್ಷೆ ನೆಟ್ಟಾ ಡಿಸೋಜಾ ಎಂಬುದು ಸ್ಪಷ್ಟವಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

Share.

Comments are closed.

scroll