ಯುಪಿಎ ಅವಧಿಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ರವರು ಬಾಂಗ್ಲಾದೇಶಕ್ಕೆ ಭೇಟಿ ನೀಡಿದ ಫೋಟೊ ಎಂದು ಪೋಸ್ಟ್ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಅಲ್ಲದೆ ಈ ಪ್ರವಾಸದ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾರವರ ಪಕ್ಕ ಮುಖ್ಯ ಖುರ್ಚಿಯಲ್ಲಿ ಕುಳಿತಿದ್ದರೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ರನ್ನು ಕಡೆಗಣಿಸಲಾಗಿದೆ ಎಂದು ಪ್ರತಿಪಾದಿಸಲಾಗಿದೆ. ಇದು ನಿಜವೇ ಪರಿಶೀಲಿಸೋಣ ಬನ್ನಿ.

ಪ್ರತಿಪಾದನೆ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ರವರು ಬಾಂಗ್ಲಾದೇಶಕ್ಕೆ ಭೇಟಿ ನೀಡಿದಾಗ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾರವರ ಪಕ್ಕ ಮುಖ್ಯ ಖುರ್ಚಿಯಲ್ಲಿ ಕುಳಿತಿದ್ದಾರೆ.
ನಿಜಾಂಶ: ಪೋಸ್ಟ್ನಲ್ಲಿ ಹಂಚಿಕೊಂಡಿರುವ ಫೋಟೊ 2019ರಲ್ಲಿ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾರವರು ಭಾರತಕ್ಕೆ ನಾಲ್ಕು ದಿನಗಳ ಭೇಟಿ ನೀಡಿದ ಸಂದರ್ಭದಲ್ಲಿ ತೆಗೆಯಲಾಗಿದೆ. ಆಗ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ಹಲವು ವಿರೋಧ ಪಕ್ಷದ ಮುಖಂಡರನ್ನು ಅವರು ಭೇಟಿಯಾಗಿದ್ದರು. ಈ ಫೋಟೊಗೂ ಮನಮೋಹನ್ ಸಿಂಗ್ರವರ 2011ರ ಬಾಂಗ್ಲಾ ಭೇಟಿಗೂ ಯಾವುದೇ ಸಂಬಂಧವಿಲ್ಲ. ಹಾಗಾಗಿ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.
ಫೋಟೊವನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮೂಲಕ ಹುಡುಕಿದಾಗ ಇದೇ ರೀತಿಯ ಫೋಟೊ ಅಕ್ಟೋಬರ್ 06, 2019ರಂದು ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ವೆಬ್ಸೈಟ್ ಪ್ರಕಟಿಸಿದ ಲೇಖನದಲ್ಲಿ ಕಂಡುಬಂದಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಇತರ ಕಾಂಗ್ರೆಸ್ ಮುಖಂಡರು ಹಲವು ವಿರೋಧ ಪಕ್ಷದ ಮುಖಂಡರನ್ನು ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾರವರನ್ನು ಅಕ್ಟೋಬರ್ 06, 2019ರಂದು ನವದೆಹಲಿಯಲ್ಲಿ ಭೇಟಿಯಾದರು ಎಂದು ವರದಿಯಲ್ಲಿ ತಿಳಿಸಲಾಗಿದೆ. ಹಾಗಾಗಿ ಈ ಫೋಟೊ 2019ರಲ್ಲಿ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾರವರು ಭಾರತಕ್ಕೆ ನಾಲ್ಕು ದಿನಗಳ ಭೇಟಿ ನೀಡಿದ ಸಂದರ್ಭದಲ್ಲಿ ತೆಗೆದುದ್ದು ಎಂಬುದು ಖಚಿತವಾಗುತ್ತದೆ.

ಅಕ್ಟೋಬರ್ 06, 2019ರಂದು ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾರವರು ಕಾಂಗ್ರೆಸ್ ಮುಖಂಡರೊಂದಿಗೆ ಸಭೆ ನಡೆಸಿದರು ಎಂದು ಇದೇ ಚಿತ್ರದೊಂದಿಗೆ ಹಲವಾರು ವೆಬ್ಸೈಟ್ಗಳು ವರದಿ ಮಾಡಿವೆ. ಅವುಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು. ಆ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾರವರ ಪಕ್ಕ ಮುಖ್ಯ ಖುರ್ಚಿಯಲ್ಲಿ ಕುಳಿತಿದ್ದಾರೆ. ಆದರೆ ಈ ಫೋಟೊ ಮನಮೋಹನ್ ಸಿಂಗ್ರವರ 2011ರ ಬಾಂಗ್ಲಾ ಭೇಟಿಗೆ ಸಂಬಂಧಿಸಿದ್ದಲ್ಲ.

ಒಟ್ಟಾರೆಯಾಗಿ 2019ರಲ್ಲಿ ದೆಹಲಿಯಲ್ಲಿ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾರೊಂದಿಗಿನ ಕಾಂಗ್ರೆಸ್ ಮುಖಂಡರ ಸಭೆಯ ಫೋಟೊವನ್ನು ಮನಮೋಹನ್ ಸಿಂಗ್ರವರು ಪ್ರಧಾನಿಯಾಗಿದ್ದಾಗ ತೆಗೆದು ಚಿತ್ರ ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ.