Fake News - Kannada
 

ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಮೂಲ ಫೋಟೋವನ್ನು ಎಡಿಟ್ ಮಾಡಲಾಗಿದೆ

0

ಆಮ್ ಆದ್ಮಿ ಪಕ್ಷದ ಸದಸ್ಯ ಮತ್ತು ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಫೋಟೋ ಎಂಬ ಹೇಳಿಕೆಯೊಂದಿಗೆ ಪೋಸ್ಟ್ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಪ್ರತಿಪಾದನೆ : ಎಎಪಿಯ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಫೋಟೋ.

ಸತ್ಯಾಂಶ : ರಾಘವ್ ಚಡ್ಡಾ ಅವರ ಫೋಟೋವನ್ನು ಎಡಿಟ್ ಮಾಡಲಾಗಿದೆ ಮತ್ತು ಮೇಕಪ್ ಸೇರಿಸಲಾಗಿದೆ. ಆಮ್ ಆದ್ಮಿ ಪಕ್ಷದ ಸದಸ್ಯ ಮತ್ತು ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಫೋಟೋ ಲ್ಯಾಕ್ಮೆ ಫ್ಯಾಶನ್ ವೀಕ್ 2022 ರಂದು ಭಾಗವಹಿದ್ದ ಸಂದರ್ಭದಲ್ಲಿ ಸೆರೆಹಿಡಿಯಲಾಗಿದೆ. ಆದರೆ ಅವರು ಅಲ್ಲಿ ಮಾಡೆಲ್‌ಆಗಿ ಭಾಗವಹಿಸಿರಲಿಲ್ಲ ಬದಲಿಗೆ ಫ್ಯಾಶನ್ ಡಿಸೈನರ್ ಆಗಿರುವ ಅವರ ಸೋದರ ಮಾವನ ಆಹ್ವಾನದ ಮೇಲೆ ಭಾಗವಹಿಸಿದ್ದರು. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಫೋಟೋವನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ, ಟ್ವೀಟ್‌ನಲ್ಲಿ ರಾಘವ್ ಚಡ್ಡಾ ಅವರ ಇದೇ ರೀತಿಯ ಫೋಟೋ ಕಂಡುಬಂದಿದೆ. ಟ್ವೀಟ್ ಪ್ರಕಾರ, ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ, ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರು ಲ್ಯಾಕ್ಮೆ ಫ್ಯಾಶನ್ ವೀಕ್ 2022 ರಲ್ಲಿ ಭಾಗವಹಿಸಿದ್ದರು. ರಾಘವ್ ಚಡ್ಡಾ ಅವರು ತಮ್ಮ ಇನ್‌ಸ್ಟಾಗ್ರಾಮ್ ಪುಟದಲ್ಲಿ ಹಾಕಿರುವ ಪೋಸ್ಟ್ ಪ್ರಕಾರ, ಫ್ಯಾಶನ್ ಡಿಸೈನರ್ ಆಗಿರುವ ತಮ್ಮ ಸೋದರ ಮಾವನ ಕಾರಣಕ್ಕೆ  ಭಾಗವಹಿಸಿದ್ದೆ ಎಂದು ಹೇಳಿದ್ದಾರೆ.

ವೈರಲ್ ಫೋಟೋವನ್ನು ಟ್ವೀಟ್‌ನಲ್ಲಿ ಕಂಡುಬರುವ ಫೋಟೋದೊಂದಿಗೆ ಹೋಲಿಸಿದಾಗ, ವೈರಲ್ ಫೋಟೋವನ್ನು ಎಡಿಟ್ ಮಾಡಲಾಗಿದೆ ಮತ್ತು ಅದಕ್ಕೆ ಮೇಕಪ್ ಮಾಡಲಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಮೂಲ ಫೋಟೋವನ್ನು ಎಡಿಟ್ ಮಾಡಿ ಮೇಕಪ್ ಮಾಡಿರುವಂತೆ ತಿದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.

Share.

Comments are closed.

scroll