Fake News - Kannada
 

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ರಾಹುಲ್ ಗಾಂಧಿಯನ್ನು ಹೊಗಳಿಸಿದ್ದಾರೆ ಎಂಬುದು ಸುಳ್ಳು

0

ರಾಹುಲ್ ಗಾಂಧಿ ನಾಯಕತ್ವದ ಕುರಿತು RSS ಮುಖ್ಯಸ್ಥ ಮೋಹನ್ ಭಾಗವತ್ ಮಾತನಾಡಿದ್ದಾರೆ ಎಂಬ ಹೇಳಿಕೆಯೊಂದಿಗೆ ಪೋಸ್ಟ್‌ರ್‌ಗಳುನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ‘ರಾಹುಲ್ ಗಾಂಧಿ ಭವಿಷ್ಯದ ನಾಯಕ. ಅವನನ್ನು ಲಘುವಾಗಿ ಪರಿಗಣಿಸಿದರೆ ಭಾರಿ ಬೆಲೆ ತೆರಬೇಕಾಗುತ್ತದೆ. ಅವರ ಕುಟುಂಬದ ಇತಿಹಾಸವನ್ನು ತಿಳಿದ ಮೇಲು ರಾಹುಲ್ ಗಾಂಧಿಯನ್ನು ಲಘುವಾಗಿ ಪರಿಗಣಿಸುವುದು ಸರಿಯಲ್ಲ ಎಂದು RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ (ಇಲ್ಲಿ ಮತ್ತು ಇಲ್ಲಿ) ಹಲವು ಪೋಸ್ಟ್‌ಗಳನ್ನು ಹಂಚಿಕೊಳ್ಳಲಾಗಿದೆ. ಇದು ನಿಜವೆ ಎಂಬುದನ್ನು ಪರಿಶೀಲಿಸೋಣ.

ಪ್ರತಿಪಾದನೆ: ರಾಹುಲ್ ಗಾಂಧಿ ಭವಿಷ್ಯದ ನಾಯಕ. ಅವರನ್ನು ಲಭುವಾಗಿ ಪರಿಗಣಿಸಬಾರದು ಎಂದು RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

ನಿಜಾಂಶ: RSS ಮುಖ್ಯಸ್ಥ ಮೋಹನ್ ಭಾಗವತ್ ಅವರು ಯಾವುದೇ ಹೇಳಿಕೆ ನೀಡಿದರೆ ಮಾಧ್ಯಮಗಳು ಅದನ್ನು ಪ್ರಕಟಿಸುತ್ತವೆ. ಅವರು ರಾಹುಲ್ ಗಾಂಧಿ ನಾಯಕತ್ವ ಕುರಿತು ಇತ್ತೀಚೆಗೆ ಮಾತನಾಡಿದ್ದಾರೆಯೇ ಎಂದು ಪರಿಶೀಲಿಸಲು ಸಂಬಂಧಿತ ಕೀವರ್ಡ್‌ಗಳೊಂದಿಗೆ ಸರ್ಚ್ ಮಾಡಲಾಗಿದ್ದು, ಮೋಹನ್ ಭಾಗವತ್ ಹೇಳಿಕೆಯ ಬಗ್ಗೆ ಯಾವುದೇ ವರದಿಗಳು ಕಂಡುಬಂದಿಲ್ಲ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಎಲ್ಲಾ ಮಾದ್ಯಮಗಳಲ್ಲಿ ಈ ಕುರಿತು ಹುಡುಕಿದಾಗ ಮೋಹನ್ ಭಾಗವತ್‌ರವರು ರಾಹುಲ್ ಗಾಂಧಿ ಕುರಿತು ಮಾತನಾಡಿದ ಇತ್ತೀಚಿನ ಯಾವುದೇ ವಿಶ್ವಾಸಾರ್ಹ ಮೂಲಗಳು ಕಂಡುಬಂದಿಲ್ಲ. ಇದಲ್ಲದೆ, ನಾವು RSS ಮತ್ತು ಮೋಹನ್ ಭಾಗವತ್ ಅವರ ಅಧಿಕೃತ ಟ್ವಿಟರ್ ಹ್ಯಾಂಡಲ್‌ಗಳಲ್ಲಿ ಸಂಬಂಧಿತ ಟ್ವೀಟ್‌ಗಳನ್ನು ಪರಿಶೀಲಿಸಿದಾಗಲೂ, ಅವರು ವೈರಲ್ ಪೋಸ್ಟ್‌ನ ಹೇಳಿಕೆಯನ್ನು ಬೆಂಬಲಿಸುವ ಯಾವುದೇ ಟ್ವೀಟ್ ಕಂಡುಬಂದಿಲ್ಲ.

ವೈರಲ್ ಪೋಸ್ಟ್‌ನಲ್ಲಿರುವ ಮೋಹನ್ ಭಾಗವತ್ ಅವರ ಫೋಟೋವನ್ನು ಗೂಗಲ್ ರಿವರ್ಸ್ ಇಮೇಜ್‌ ಸರ್ಚ್ ಮಾಡಿದಾಗ ‘‘The Future of Bharat: An RSS Perspective’ ಈವೆಂಟ್‌ನಲ್ಲಿ ಸೆರೆಹಿಡಿಯಲಾದ ಭಾಗವತ್ ಅವರ ಅದೇ ಚಿತ್ರದೊಂದಿಗೆ ಟೈಮ್ಸ್ ಆಫ್ ಇಂಡಿಯಾ ಲೇಖನ ಲಭ್ಯವಾಗಿದೆ. 2018 ರ ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಮೋಹನ್ ಭಾಗವತ್ ಅವರು, ‘ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪ್ರಮುಖ ಪಾತ್ರ ವಹಿಸಿದೆ’ ಎಂದು ಹೇಳಿದ್ದಾರೆ. ಆದರೆ, ಈ ಸಮಾರಂಭದಲ್ಲಿ ಮೋಹನ್ ಭಾಗವತ್ ಅವರು ರಾಹುಲ್ ಗಾಂಧಿ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ. ಕಾರ್ಯಕ್ರಮದ ಸಂಪೂರ್ಣ ಭಾಷಣವನ್ನು ಇಲ್ಲಿ ನೋಡಬಹುದು. ಈ ಎಲ್ಲಾ ಆಧಾರಗಳೊಂದಿಗೆ,  ಮೋಹನ್‌ ಭಾಗವತ್ ಅವರು ಈ ಹೇಳಿಕೆಯನ್ನು ನೀಡಿಲ್ಲ ಎಂದು ಸ್ಪಷ್ಟವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ರಾಹುಲ್ ಗಾಂಧಿ ಕುರಿತು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ವೈರಲ್ ಹೇಳಿಕೆ ನೀಡಿಲ್ಲ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ಸುಳ್ಳು.

Share.

Comments are closed.

scroll