ಬಾಂಗ್ಲಾದೇಶದ ಜನರು ಹಿಂದೂ ದೇವಾಲಯವನ್ನು ಧ್ವಂಸ ಮಾಡುವ ದೃಶ್ಯಗಳು ಎಂದು ಹೇಳುವ ಪೋಸ್ಟ್ ಮೂಲಕ ವೀಡಿಯೊವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸೋಣ.
ಪ್ರತಿಪಾದನೆ: ಬಾಂಗ್ಲಾದೇಶದಲ್ಲಿ ಜನರು ಹಿಂದೂ ದೇವಾಲಯವನ್ನು ಧ್ವಂಸಗೊಳಿಸುತ್ತಿರುವ ವೀಡಿಯೊ.
ನಿಜಾಂಶ: ವಿಡಿಯೋ ಪಾಕಿಸ್ತಾನದ್ದು ಮತ್ತು ಬಾಂಗ್ಲಾದೇಶದಲ್ಲ. ಆಗಸ್ಟ್ 2021 ರಲ್ಲಿ ಪಾಕಿಸ್ತಾನದ ರಹೀಮ್ ಯಾರ್ ಜಿಲ್ಲೆಯ ಸಿದ್ಧಿ ವಿನಾಯಕ ದೇವಸ್ಥಾನವನ್ನು ಗುಂಪೊಂದು ಧ್ವಂಸಗೊಳಿಸಿದ ಘಟನೆಯ ದೃಶ್ಯಗಳಾಗಿವೆ. ಬಾಂಗ್ಲಾದೇಶದಲ್ಲೂ ದೇವಾಲಯಗಳನ್ನು ಧ್ವಂಸಗೊಳಿಸಲಾಗಿದೆ, ಆದರೆ ಈ ವೈರಲ್ ವೀಡಿಯೊ ಆ ಘಟನೆಗೆ ಸಂಬಂಧಿಸಿಲ್ಲ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.
ವೀಡಿಯೊದ ಸ್ಕ್ರೀನ್‌ಶಾಟ್‌ಗಳನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ, ಟೈಮ್ಸ್ ಆಫ್ ಇಂಡಿಯಾ ಲೇಖನದಲ್ಲಿ ಇದೇ ರೀತಿಯ ದೃಶ್ಯಗಳು ಕಂಡುಬಂದಿವೆ. ಲೇಖನದ ಪ್ರಕಾರ, ದೃಶ್ಯಗಳು ಪಾಕಿಸ್ತಾನದ ಹಿಂದೂ ದೇವಾಲಯದಲ್ಲಿ ನಡೆದ ಘಟನೆಗೆ ಸಂಬಂಧಿಸಿವೆ. ಪಾಕಿಸ್ತಾನದ ರಹೀಮ್ ಯಾರ್ ಖಾನ್ ಜಿಲ್ಲೆಯ ಸಿದ್ಧಿ ವಿನಾಯಕ ದೇವಸ್ಥಾನವನ್ನು ಗುಂಪೊಂದು ಧ್ವಂಸಗೊಳಿಸಿದೆ.
ಕೆಲವು ಇತರ ಸುದ್ದಿವಾಹಿನಿಗಳು (ಇಲ್ಲಿ ಮತ್ತು ಇಲ್ಲಿ) ಅದೇ ದೃಶ್ಯಗಳು ಪಾಕಿಸ್ತಾನದಿಂದ ಬಂದವು ಮತ್ತು ಬಾಂಗ್ಲಾದೇಶದಿಂದಲ್ಲ ಎಂದು ವರದಿ ಮಾಡಿದೆ.
2021ರ ಆಗಸ್ಟ್‌ನಲ್ಲಿ ಈ ವಿಡಿಯೋ ವೈರಲ್ ಆಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಟೀಕೆಗೆ ಒಳಗಾದಾಗ, ಪಾಕಿಸ್ತಾನದ ಪ್ರಧಾನಿ ಕಚೇರಿಯು ಘಟನೆಯ ಕುರಿತು ತನಿಖೆಗೆ ಆದೇಶಿಸಿತ್ತು. ಅಲ್ಲದೆ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಹಾನಿಗೊಳಗಾದ ದೇವಾಲಯವನ್ನು ದುರಸ್ತಿ ಮಾಡಿಸಿ ನಂತರ ಹಿಂದೂ ಸಮುದಾಯಕ್ಕೆ ಹಸ್ತಾಂತರಿಸಲಾಗಿದೆ ಎಂದು ವರದಿಯಾಗಿದೆ.
ಇತ್ತೀಚೆಗೆ, ಬಾಂಗ್ಲಾದೇಶದಲ್ಲೂ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿದ ಪೋಸ್ಟ್‌ಅನ್ನು ಮುಸ್ಲಿಂ ಸಮುದಾಯದ ಫೇಸ್‌ಬುಕ್ ಪೇಜ್‌ನಲ್ಲಿ ಹಂಚಿಕೊಂಡಿದ್ದರು. ಈ ಘಟನೆಗೆ ಸಂಬಂಧಿಸಿದ ಲೇಖನಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಆದರೆ, ವೈರಲ್ ಆಗಿರುವ ವಿಡಿಯೋ ಬಾಂಗ್ಲಾದೇಶದ್ದು ಅಲ್ಲ.
ಒಟ್ಟಾರೆಯಾಗಿ ಹೇಳುವುದಾದರೆ, ಪಾಕಿಸ್ತಾನದ ಹಿಂದೂ ದೇವಾಲಯವನ್ನು ಧ್ವಂಸಗೊಳಿಸುವ ಈ ವೀಡಿಯೊವನ್ನು ಬಾಂಗ್ಲಾದೇಶಕ್ಕೆ ಸಂಬಂಧಿಸಿದೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.