Fake News - Kannada
 

ಕಳ್ಳತನಕ್ಕೆ ಸಂಬಂಧಿಸಿದ ವೀಡಿಯೊವನ್ನು ತಿರುಪತಿ ದೇವಸ್ಥಾನ ಸಮಿತಿ ಸದಸ್ಯನ (TTD) ಮನೆಗೆ IT ದಾಳಿ ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ

0

ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಬೋರ್ಡ್ 16 ಟ್ರಸ್ಟಿ ಸದಸ್ಯರಲ್ಲಿ ಒಬ್ಬರಿಂದ 128 ಕೆಜಿ ಚಿನ್ನ, 150 ಕೋಟಿ ರೂಪಾಯಿ ನಗದು ಮತ್ತು 70 ಕೋಟಿ ಮೌಲ್ಯದ ವಜ್ರಗಳನ್ನು ಆದಾಯ ತೆರಿಗೆ ಇಲಾಖೆ ವಶಪಡಿಸಿಕೊಂಡಿರುವ ಇತ್ತೀಚಿನ ದೃಶ್ಯಗಳು ಎಂದು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಇತರ ಕೆಲವು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ದಾಳಿಗೊಳಗಾದ ಟ್ರಸ್ಟಿಯನ್ನು ಜೆ. ಸೇಕರ್ ರೆಡ್ಡಿ ಎಂದು ಹೇಳಿಕೊಂಡು ಅವರ ಪೋಸ್ಟ್‌ಗಳಲ್ಲಿ ಅವರ ಫೋಟೋವನ್ನು ಹಂಚಿಕೊಂಡಿವೆ. ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಪ್ರತಿಪಾದನೆ : ಟಿಟಿಡಿ ಮಂಡಳಿ ಸದಸ್ಯ ಜೆ.ಸೇಕರ್ ರೆಡ್ಡಿ ಅವರ ಮನೆಯಿಂದ ವಶಪಡಿಸಿಕೊಂಡ ಆಭರಣಗಳನ್ನು ತೋರಿಸುವ ವೀಡಿಯೊ.

ಸತ್ಯಾಂಶ : ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವೀಡಿಯೊ ತಮಿಳುನಾಡಿನ ವೆಲ್ಲೂರಿನಲ್ಲಿ ಇತ್ತೀಚೆಗೆ ನಡೆದ ಆಭರಣ ದರೋಡೆಗೆ ಸಂಬಂಧಿಸಿದೆ. 14 ಡಿಸೆಂಬರ್ 2021 ರ ಮಧ್ಯರಾತ್ರಿ ವೆಲ್ಲೂರಿನ ಜೋಸ್ ಅಲುಕ್ಕಾಸ್ ಶೋರೂಮ್‌ನಿಂದ 15 ಕೆಜಿ ಚಿನ್ನ ಮತ್ತು ಸುಮಾರು 500 ಗ್ರಾಂ ವಜ್ರಗಳನ್ನು ದರೋಡೆ ಮಾಡಲಾಯಿತು. ತಮಿಳುನಾಡು ಪೊಲೀಸರು ಕಳೆದುಹೋದ ಎಲ್ಲಾ ಆಭರಣಗಳನ್ನು ವಶಪಡಿಸಿಕೊಂಡರು ಮತ್ತು ಅಪರಾಧಿ ಡೀಕಾರಾಮನನ್ನು ಬಂಧಿಸಿದ್ದಾರೆ. 2016ರಲ್ಲಿ ಟಿಟಿಡಿ ಆಡಳಿತ ಮಂಡಳಿ ಸದಸ್ಯರಾಗಿದ್ದ ಜೆ.ಸೇಕರ್ ರೆಡ್ಡಿ ಅವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ₹100 ಕೋಟಿ ನಗದು ಹಾಗೂ 120 ಕೆಜಿ ಚಿನ್ನಾಭರಣ ವಶಪಡಿಸಿಕೊಂಡಿದ್ದರು. ಆದರೆ, ಸಿಬಿಐ ಸಲ್ಲಿಸಿದ ವರದಿಯ ನಂತರ ನಂತರ ಸಾಕ್ಷ್ಯಾಧಾರಗಳ ಕೊರತೆಯ ಆಧಾರದ ಮೇಲೆ 2020 ರ ಸೆಪ್ಟೆಂಬರ್‌ನಲ್ಲಿ ಸೇಕರ್ ರೆಡ್ಡಿ ವಿರುದ್ಧ ಸಿಬಿಐ ದಾಖಲಿಸಿದ ಪ್ರಕರಣವನ್ನು ವಿಶೇಷ ನ್ಯಾಯಾಲಯವು ವಜಾಗೊಳಿಸಿತು. ಪ್ರಕರಣಗಳು ಮುಕ್ತಾಯವಾದಾಗ ಸೇಕರ್ ರೆಡ್ಡಿ ಅವರು ಟಿಟಿಡಿ ಮಂಡಳಿಗೆ ಮರಳಿದ್ದರು. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ವೀಡಿಯೊದಲ್ಲಿನ ಸ್ಕ್ರೀನ್‌ಶಾಟ್‌ಗಳನ್ನು ರಿವರ್ಸ್ ಇಮೇಜ್ ಸರ್ಚ್‌ ಮೂಲಕ ಹುಡುಕಿದಾಗ 22 ಡಿಸೆಂಬರ್ 2021 ರಂದು ‘ಜಯ ಟಿವಿ’ ಸುದ್ದಿ ವಾಹಿನಿ ಪ್ರಕಟಿಸಿದ ವೀಡಿಯೊದಲ್ಲಿ ಇದೇ ರೀತಿಯ ದೃಶ್ಯಗಳಿರುವ ವೀಡಿಯೊ ಕಂಡುಬಂದಿದೆ. ಈ ಸುದ್ದಿ ವಾಹಿನಿಯು ಇತ್ತೀಚೆಗೆ ತಮಿಳುನಾಡಿನ ವೆಲ್ಲೂರಿನಲ್ಲಿರುವ ಜೋಸ್ ಅಲುಕ್ಕಾಸ್ ಶೋರೂಮ್‌ನಿಂದ ದರೋಡೆ ಮಾಡಿದ ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡ ದೃಶ್ಯಗಳು ಎಂದು ವರದಿ ಮಾಡಿದೆ. ಅದೇ ರೀತಿ ವರದಿ ಮಾಡುತ್ತಾ, ಹಲವಾರು ಇತರ ತಮಿಳು ಸುದ್ದಿ ವೆಬ್‌ಸೈಟ್‌ಗಳು ತಮ್ಮ ಯೂಟ್ಯೂಬ್ ಚಾನೆಲ್‌ಗಳಲ್ಲಿ ಇದೇ ರೀತಿಯ ವೀಡಿಯೊಗಳನ್ನು ಪ್ರಕಟಿಸಿವೆ. ಅವುಗಳನ್ನು ಲ್ಲಿ ಮತ್ತು ಇಲ್ಲಿ ಕಾಣಬಹುದು.  

14 ಡಿಸೆಂಬರ್ 2021 ರ ಮಧ್ಯರಾತ್ರಿ ವೆಲ್ಲೂರಿನ ಜೋಸ್ ಅಲುಕ್ಕಾಸ್ ಶೋರೂಮ್‌ನಿಂದ 15 ಕೆಜಿ ಚಿನ್ನ ಮತ್ತು ಸುಮಾರು 500 ಗ್ರಾಂ ವಜ್ರಗಳನ್ನು ದರೋಡೆ ಮಾಡಲಾಯಿತು. ತನಿಖೆಯ ನಂತರ ವೆಲ್ಲೂರು ಪೊಲೀಸರು ವೆಲ್ಲೂರಿನ ಸ್ಮಶಾನದಲ್ಲಿ ಹೂತಿಟ್ಟಿದ್ದ ಎಲ್ಲಾ ಕದ್ದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಜೋಸ್ ಅಲುಕ್ಕಾಸ್ ಶೋರೂಂನಿಂದ ಚಿನ್ನ ಮತ್ತು ವಜ್ರಗಳನ್ನು ದರೋಡೆ ಮಾಡಿದ್ದ ಆರೋಪಿ ಡೀಕಾರಾಮನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಈ ದರೋಡೆಯ ಸಂಪೂರ್ಣ ವಿವರಗಳನ್ನು ವರದಿ ಮಾಡಿ, ಹಲವಾರು ಇತರ ಸುದ್ದಿ ವೆಬ್‌ಸೈಟ್‌ಗಳು ಸಹ ಲೇಖನಗಳನ್ನು ಪ್ರಕಟಿಸಿವೆ. ಅವುಗಳನ್ನು  ಇಲ್ಲಿ ಮತ್ತು ಇಲ್ಲಿ ನೋಡಬಹುದು.

2016ರಲ್ಲಿ ತಿರುಪತಿ ದೇವಾಲಯದ ಆಡಳಿತ ಮಂಡಳಿ ಸದಸ್ಯರಾಗಿದ್ದ ಜೆ. ಶೇಕರ್ ರೆಡ್ಡಿ ಅವರ ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಅ ಸಂರ್ದ‌ಭ‌ದಲ್ಲಿ ಆಂಧ್ರಪ್ರದೇಶದ ಪೊಲಿಸರು ₹100 ಕೋಟಿ ನಗದು ಹಾಗೂ 120 ಕೆಜಿ ಚಿನ್ನಾಭರಣ ವಶಪಡಿಸಿಕೊಂಡಿದ್ದರು. ನಂತರ ಸಾಕ್ಷ್ಯಾಧಾರಗಳ ಕೊರತೆಯ ಆಧಾರದ ಮೇಲೆ 2020 ರ ಸೆಪ್ಟೆಂಬರ್ ನಲ್ಲಿ ಶೇಕರ್ ರೆಡ್ಡಿ ವಿರುದ್ಧ CBI ದಾಖಲಿಸಿದ ಪ್ರಕರಣವನ್ನು ವಿಶೇಷ ನ್ಯಾಯಾಲಯವು ಮುಚ್ಚಿ ಹಾಕಿತ್ತು. ಪ್ರಕರಣವನ್ನು ವಜಾ ಮಾಡಿದ ನಂತರ ಶೇಕರ್ ರೆಡ್ಡಿ ಮತ್ತೇ ತಿರುಪತಿ ಆಡಳಿತ ಮಂಡಳಿಗೆ ಸೇರಿದ್ದರು. ಆದರೆ 2021 ರ ಸಮಿತಿಗೆ ಅವರನ್ನು ಆಯ್ಕೆ ಮಾಡಲಿಲ್ಲ. ಇತ್ತೀಚೆಗೆ, ಟಿಟಿಡಿ ಸದಸ್ಯರೊಬ್ಬರ ಮೇಲೆ ಐಟಿ ಇಲಾಖೆಯು ದಾಳಿ ನಡೆಸಿದೆ ಎಂದು ಹೇಳುವ ಇದೇ ರೀತಿಯ ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದಾಗ, FACTLY ಇದರ ಕುರಿತು fact-check ಮಾಡಲಾಗಿತ್ತು, ಅದರ ವರದಿ ಇಲ್ಲಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಆದಾಯ ತೆರಿಗೆ ಅಧಿಕಾರಿಗಳು 2016 ರಲ್ಲಿ ಟಿಟಿಡಿ ಮಂಡಳಿಯ ಸದಸ್ಯ ಸೇಕರ್ ರೆಡ್ಡಿ ಅವರ ಮನೆ ಮೇಲೆ ದಾಳಿ ನಡೆಸಿದರು ಆದರೆ ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ವೀಡಿಯೊವು ವೆಲ್ಲೂರಿನಲ್ಲಿ ಇತ್ತೀಚೆಗೆ ನಡೆದ ದರೋಡೆಗೆ ಸಂಬಂಧಿಸಿದೆ.

Share.

About Author

Comments are closed.

scroll